ಅ.15ರೊಳಗೆ ಮರಳು ಸಮಸ್ಯೆ ನಿವಾರಣೆ: ಎಚ್‌ಡಿಕೆ ಭರವಸೆ

Team Udayavani, Sep 26, 2018, 6:00 AM IST

e-24.jpg

ಬೆಂಗಳೂರು: ಕರಾವಳಿ ಜಿಲ್ಲೆಗಳ ಮರಳಿನ ಸಮಸ್ಯೆ ನೀಗಿಸಲು ಅ.15ರೊಳಗೆ ಎಲ್ಲ ನಿಯಮ ಸಡಿಲಗೊಳಿಸಿ ಸಾರ್ವಜನಿಕರಿಗೆ ಮರಳು ಸಿಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಮುಖ್ಯಮಂತ್ರಿಯವರು, ಎರಡೂ ಜಿಲ್ಲೆಗಳ  ಜನತೆಗೆ ಅ. 15ರ ಅನಂತರ ಸುಗಮ ವಾಗಿ ಮರಳು ದೊರೆಯಲಿದೆ ಎಂದು ಭರವಸೆ ನೀಡಿದರು.

ಕರಾವಳಿ ನಿಯಂತ್ರಣ ವಲಯ(ಸಿಆರ್‌ ಝಡ್‌)ದಲ್ಲಿ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ತಡೆಯೊಡ್ಡಿರುವುದರಿಂದ ಎರಡೂ ಜಿಲ್ಲೆಗಳಲ್ಲಿ ಮರಳಿನ ಕೊರತೆ ಯುಂಟಾಗಿದೆ. ಆದ್ದರಿಂದ ಸಾರ್ವಜನಿಕರು ತೊಂದರೆ ಎದುರಿಸುವಂತಾಗಿದೆ. ಖಾಸಗಿ ಯೋಜನೆಗಳಷ್ಟೇ ಅಲ್ಲದೆ ಸರಕಾರದ ವಸತಿ ಯೋಜನೆಗಳಿಗೂ ಮರಳು ಸಿಗುತ್ತಿಲ್ಲ ಎಂದು ಶಾಸಕರ ನಿಯೋಗ ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು. ಈ ಹಿನ್ನೆಲೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಸ್ಥಳದಲ್ಲೇ ಸೂಚನೆ ನೀಡಿದರು. 

ಸಿಆರ್‌ಝಡ್‌ ಪ್ರದೇಶದ ಸಮೀಕ್ಷೆ ನಡೆಸಲಾಗಿದ್ದು, ಮರಳು ದೊರೆ ಯುವ ಕುರಿತಂತೆ ಸುರತ್ಕಲ್‌ ಎನ್‌ಐಟಿಕೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಬೇಕು. ಆ ವರದಿ ಆಧರಿಸಿ ರಾಜ್ಯ ಸರಕಾರ ಈಗಾಗಲೇ ಸಾಂಪ್ರದಾಯಿಕ ಮರಳುಗಣಿಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಮರಳು ತೆಗೆಯಲು ಅನುಮತಿ ನೀಡಲಿದೆ ಎಂದು ಹೇಳಿದರು. ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿಯೂ ಟೆಂಡರ್‌ ಪ್ರಕ್ರಿಯೆ ಕೈ ಬಿಟ್ಟು ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅವಕಾಶ ನೀಡುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದು, ಅದಕ್ಕೂ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಸಾರ್ವಜನಿಕರು ಮನೆ ಕಟ್ಟಿಕೊಳ್ಳಲು ಹಾಗೂ ಸಣ್ಣಪುಟ್ಟ ಕೆಲಸಗಳಿಗೆ ಸ್ವಂತ ಟ್ರ್ಯಾಕ್ಟರ್‌ ಹಾಗೂ ಎತ್ತಿನಗಾಡಿಗಳಲ್ಲಿ  ಮರಳು ಸಾಗಿಸುವುದಕ್ಕೆ ಗಣಿ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಕಿರುಕುಳ ಕೊಡುವುದನ್ನು ತಡೆಯುವಂತೆ ಸೂಚಿಸಲಾಗಿದೆ. ಅಗತ್ಯ ಕಾರ್ಯಗಳಿಗೆ ಸಾರ್ವಜನಿಕರು ಮರಳು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಹೇಳಲಾಗಿದೆ.

ಪ್ರಸ್ತುತ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ನಿರ್ಬಂಧ ಹೇರಿರುವು ದರಿಂದ ಪ್ರತಿ ಲೋಡ್‌ಗೆ 28ರಿಂದ 30 ಸಾವಿರ ರೂ. ನೀಡಬೇಕಾಗುತ್ತಿದೆ. ಸರಕಾರ ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅನುಮತಿ ನೀಡಿದರೆ ಎರಡೂ ಜಿಲ್ಲೆಗಳಲ್ಲಿ 3 -4 ಸಾವಿರ ರೂ.ಗೆ ಒಂದು ಲೋಡ್‌ ಮರಳು ಸಿಗುವಂತಾಗುತ್ತದೆ. ಇದರಿಂದ ಅವಳಿ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾರ್ಯಗಳೂ ತ್ವರಿತವಾಗಿ ಪೂರ್ಣಗೊಳ್ಳಲಿವೆ ಎಂದು ಶಾಸಕರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು. ಸಚಿವರಾದ ಯು.ಟಿ.ಖಾದರ್‌, ಜಯಮಾಲಾ, ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್‌ ಪೂಂಜಾ, ಸುಕುಮಾರ ಶೆಟ್ಟಿ, ಅಂಗಾರ, ರಮೇಶ್‌ ನಾಯ್ಕ, ವಿಧಾನಪರಿಷತ್‌ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಭೂ ಪರಿವರ್ತನೆ: ಮತ್ತೆ ಸಭೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆ ಕುರಿತ ಸಮಸ್ಯೆಗೂ ಪರಿಹಾರ ಕಲ್ಪಿಸುವಂತೆ ಶಾಸಕರು ಮನವಿ ಮಾಡಿದರು. ಈ ಕುರಿತು ಶೀಘ್ರ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಮತ್ತೂಂದು ಸಭೆ ಕರೆದು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು ಎನ್ನಲಾಗಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.