ಎಸ್ಸಿ,ಎಸ್ಟಿ ಮುಂಬಡ್ತಿ ಅ.12ರ ನಂತರ ಜಾರಿ​​​​​​​


Team Udayavani, Oct 5, 2018, 6:00 AM IST

vidhana-soudha-750.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿರುವ ಎಸ್‌ಸಿ-ಎಸ್‌ಟಿ ನೌಕರರ ಹಿಂಬಡ್ತಿ ವಿಚಾರದಲ್ಲಿ ಅವರ ಹಿತ ಕಾಯಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ತತ್ಸಮಾನ ಹುದ್ದೆ ಕಾಯ್ದುಕೊಳ್ಳುವ 2017ರ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕಾಯ್ದೆ ಜಾರಿ ಮಾಡುವ ಕುರಿತು ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಲ್ಲಿ ಭಿನ್ನಾಭಿಪ್ರಾಯಗಳಿದ್ದು, ಆದರೂ ಸುಪ್ರೀಂ ಕೋರ್ಟ್‌ನಲ್ಲಿ ಅಕ್ಟೋಬರ್‌ 12 ರಂದು ವಿಚಾರಣೆಗೆ ಬಂದಾಗ ಯಾವುದೇ ತೀರ್ಪು ಬರದಿದ್ದರೂ ಹೊಸ ಕಾಯ್ದೆ ಜಾರಿಗೊಳಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಈಗಾಗಲೇ ಈ ಕಾನೂನು ಅನುಷ್ಠಾನಗೊಳಿಸದಂತೆ ಸುಪ್ರೀಂ ಕೋರ್ಟ್‌ ಮೌಖೀಕ ಆದೇಶ ನೀಡಿರುವುದರಿಂದ ಈ ಬಗ್ಗೆ ರಾಜ್ಯ ಸರ್ಕಾರದ ಮೇಲೆ ನ್ಯಾಯಾಂಗ ನಿಂದನೆಯ ಆರೋಪ ಬರುವ ಸಾಧ್ಯತೆಯ ಬಗ್ಗೆ ಸಂಪುಟದಲ್ಲಿ ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ಆದರೆ, ಅಡ್ವೋಕೆಟ್‌ ಜನರಲ್‌ ಅವರೊಂದಿಗೆ ಚರ್ಚಿಸಿ, ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಅಕ್ಟೋಬರ್‌ 12 ರೊಳಗೆ ಸುಪ್ರೀಂ ಕೋರ್ಟ್‌ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.

ಗುರುವಾರ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ, ಬಿ.ಕೆ. ಪವಿತ್ರಾ ಪ್ರಕರಣ ಅನುಷ್ಠಾನಗೊಳಿಸದಿರುವ ಕುರಿತು ನ್ಯಾಯಾಂಗ ನಿಂದನೆ ಪ್ರಕರಣ ಅಕ್ಟೊಬರ್‌ 12 ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಅಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ಯಾವುದೇ ತಿರ್ಪು ನೀಡದಿದ್ದರೂ, ರಾಜ್ಯ ಸರ್ಕಾರ ತಂದಿರುವ ಕಾಯ್ದೆಯನ್ನು ಜಾರಿಗೊಳಿಸಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ಬಿ.ಕೆ. ಪವಿತ್ರಾ ಪ್ರಕರಣಕ್ಕೆ ತೀರ್ಪಿನ ಬಗ್ಗೆ ನ್ಯಾಯಾಂಗ ನಿಂದನೆ ಪ್ರಕರಣ ಈಗಾಗಲೇ ಒಂಬತ್ತು ಬಾರಿ ವಿಚಾರಣೆಗೆ ಬಂದಿದ್ದರೂ, ಸುಪ್ರೀಂ ಕೋರ್ಟ್‌ ಮುಂದೂಡುತ್ತಾ  ಬಂದಿದೆ. ಇದರಿಂದ ರಾಜ್ಯ ಸರ್ಕಾರದ ಕಾಯ್ದೆ ಅನುಷ್ಠಾನಕ್ಕೆ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 12ರ ನಂತರ ರಾಜ್ಯ ಸರ್ಕಾರದ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಮುಂಚೆಯೇ ಸುಪ್ರೀಂ ಕೊರ್ಟ್‌ ಗಮನಕ್ಕೆ ತರುವಂತೆ ಅಡ್ವೋಕೆಟ್‌ ಜನರಲ್‌ ಅವರಿಗೆ ತಿಳಿಸಲಾಗಿದೆ. ಸುಪ್ರೀಂ ಕೊರ್ಟ್‌ ಗಮನಕ್ಕೆ ತಂದು ಕಾನೂನು ಜಾರಿಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.

ಕಾನೂನು ಜಾರಿಯಿಂದ ವ್ಯತಿರಿಕ್ತ ಪರಿಣಾಮವಾದರೂ ಸರ್ಕಾರ ಅದನ್ನು ಎದುರಿಸಲು ಸಿದ್ಧವಾಗಿದೆ. ಈಗಾಗಲೇ ಎಂ. ನಾಗರಾಜ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೊರ್ಟ್‌ ತೀರ್ಪು ನೀಡಿದೆ. ಈಗ ಅನಿವಾರ್ಯವಾಗಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.