ಸರ್ಕಾರದಲ್ಲಿ ಕಾಮಗಾರಿ ಹಣ ಬಿಡುಗಡೆ ವಿಳಂಬ

Team Udayavani, Oct 6, 2018, 6:10 AM IST

hd-2000.jpg

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರ ಬಾಕಿ ಬಿಡುಗಡೆಯಾಗುತ್ತಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಜಲ ಸಂಪನ್ಮೂಲ ಇಲಾಖೆ ಸೇರಿ ಪ್ರಮುಖ ಇಲಾಖೆಗಳಲ್ಲಿ ಮಾಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 10 ಸಾವಿರ ಕೋಟಿ ರೂಪಾಯಿ ಬಾಕಿ ಉಳಿದಿದೆ.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಹೊಸ ಸರ್ಕಾರ ಬಂದ ನಂತರ ಗುತ್ತಿಗೆದಾರರ ಬಿಲ್‌ಗ‌ಳನ್ನು ಪಾವತಿಸಿಲ್ಲ. ಲೋಕೋಪಯೋಗಿ ಇಲಾಖೆಯೊಂದರಲ್ಲಿಯೇ ಸುಮಾರು 3,225 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿಗಳಿಗೂ ಹಣ ಬಿಡುಗಡೆಯಾಗದೇ ಆರಂಭವಾಗಿರುವ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಜಲ ಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಗಳಲ್ಲೂ ಗುತ್ತಿಗೆದಾರರಿಗೆ ಬಿಲ್‌ ಬಿಡುಗಡೆಯಾಗಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿಯೂ 3,250 ಕೋಟಿ ರೂ. ಬಾಕಿಯಿದೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಕುಡಿಯುವ ನೀರಿನ ಯೋಜನೆ, ಕೆರೆ ದುರಸ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿ ಹಣಕಾಸು ವರ್ಷದ ಅಂತ್ಯದಲ್ಲಿ ಕೆಲವು ಯೋಜನೆಗಳಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗಿದ್ದು, ಉಳಿದಂತೆ ಹಣದ ಕೊರತೆಯಿದೆ ಎಂಬ ಸಬೂಬು ಗುತ್ತಿಗೆದಾರರಿಗೆ ಹೇಳಲಾಗುತ್ತಿದೆ.

ಟೆಂಡರ್‌ ಭಾಗ್ಯ: ಈ ಮಧ್ಯೆ, ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಒಪ್ಪಿಗೆ ಪಡೆದ ಯೋಜನೆಗಳಿಗೆ ಈಗ ಟೆಂಡರ್‌ ಭಾಗ್ಯ ದೊರೆತಿದೆ.  ಕಾಂಗ್ರೆಸ್‌ ಸರ್ಕಾರ ಚುನಾವಣೆಗೂ ಮುಂಚೆ ತರಾತುರಿಯಲ್ಲಿ ಘೋಷಿಸಿದ್ದ ಯೋಜನೆಗಳ ಆರಂಭಕ್ಕೂ ಮುಂಚೆಯೇ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಂತಹ ಯೋಜನೆಗಳನ್ನು ಈಗ ಕೈಗೆತ್ತಿಕೊಳ್ಳಲಾಗುತ್ತಿದೆ. ಆದರೆ, ಈಗಾಗಲೇ ಯೋಜನೆಗಳು ಪೂರ್ಣಗೊಂಡ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದಿರುವುದರಿಂದ ಗುತ್ತಿಗೆದಾರರು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ತಿಳಿದುಬಂದಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಬಿಬಿಎಂಪಿಯಲ್ಲಿಯೂ ಸುಮಾರು 1,200 ಕೋಟಿ ರೂ. ಬಾಕಿಯಿದೆ. ವಾರ್ಡ್‌ ವಾರು  5 ಲಕ್ಷದಿಂದ 2 ಕೋಟಿವರೆಗೂ ಕೈಗೊಂಡಿರುವ ಕಾಮಗಾರಿಗಳ ಬಿಲ್‌ಗ‌ಳನ್ನು ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತಿದೆ. ಆದರೆ, ದೊಡ್ಡ ಯೋಜನೆಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ ಎಂದು ಹೇಳಲಾಗಿದೆ.

ಮಾರ್ಚ್‌ ನಂತರ ಇದುವರೆಗೂ ಯಾವುದೇ ಇಲಾಖೆಯಲ್ಲಿ ಕಾಮಗಾರಿಗಳಿಗೆ ಪೇಮೆಂಟ್‌ ಆಗುತ್ತಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಶೀಘ್ರವೇ ಸಭೆ ಕರೆಯುವ ಭರವಸೆ ನೀಡಿದ್ದಾರೆ. ಸರ್ಕಾರದ ಸಭೆಯಲ್ಲಿ ಏನಾಗುತ್ತದೋ  ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ.
– ಜಿ.ಎಂ.ರವೀಂದ್ರ, ಪ್ರಧಾನ ಕಾರ್ಯದರ್ಶಿ. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್‌ ಅಸೋಸಿಯೇಷನ್‌

ಹಿರಿತನದ ಆಧಾರದಲ್ಲಿ ಗುತ್ತಿಗೆದಾರರ ಬಿಲ್‌ಗ‌ಳನ್ನು ಪಾವತಿಸಲಾಗುತ್ತದೆ. ಸರ್ಕಾರದಿಂದ ಹಣ ಬಂದ ಹಾಗೆ ಅವರ ಬಿಲ್‌ಗ‌ಳನ್ನು ಬಿಡುಗಡೆ ಮಾಡುತ್ತೇವೆ. ಯಾವುದಾದರೂ ಬಿಲ್‌ಗ‌ಳು ಬಾಕಿ ಉಳಿದಿದ್ದರೆ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.
– ರಜನೀಶ್‌ ಗೋಯಲ್‌, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.