ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ಗೆ ಭಾರೀ ಡಿಮ್ಯಾಂಡ್‌

Team Udayavani, Oct 7, 2018, 6:35 AM IST

jdds.jpg

ಮಂಡ್ಯ: 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ.100ರಷ್ಟು ಫಲಿತಾಂಶ ಕೊಟ್ಟು ಜಿಲ್ಲೆಯ 7 ಕ್ಷೇತ್ರಗಳಲ್ಲೂ ಜೆಡಿಎಸ್‌ ವಿಜಯ ಪತಾಕೆ ಹಾರಿಸಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್‌ ಟಿಕೆಟ್‌ಗೆ ಡಿಮ್ಯಾಂಡ್‌ ಸೃಷ್ಟಿಯಾಗಿದೆ. ಹಾಸನ-ರಾಮನಗರ ಜಿಲ್ಲೆಗಳಿಗಿಂತಲೂ ಹೆಚ್ಚು ಸುರಕ್ಷಿತ ಮತ್ತು ಸುಭದ್ರ ಆಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವಿನ ಸ್ಪಷ್ಟತೆ ಇರುವುದರಿಂದ ಆಕಾಂಕ್ಷಿತರ ಲಾಭಿ ತೀವ್ರಗೊಂಡಿದೆ.

ಒಕ್ಕಲಿಗ ಸಮುದಾಯದ ಸಂಘಟಿತ ಚುನಾವಣಾ ಹೋರಾಟದಿಂದ ಜೆಡಿಎಸ್‌ ಪಾರುಪತ್ಯ ಮುಂದುವರಿದಿದ್ದು, ಒಂದು ವೇಳೆ ಕಾಂಗ್ರೆಸ್‌-ಜೆಡಿಎಸ್‌ ನಡುವೆಯೇ ಸ್ಪರ್ಧೆ ನಡೆದರೂ ಜೆಡಿಎಸ್‌ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ದೋಸ್ತಿಯಾಗಿ ಅಖಾಡಕ್ಕೆ ಇಳಿದರೆ ಇಲ್ಲಿ ಬಿಜೆಪಿಯನ್ನು ಮಣಿಸುವುದು ಕಷ್ಟವಾಗುವುದಿಲ್ಲ. ಹಾಗಾಗಿ, ದೋಸ್ತಿ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಮಣಿಸುವ ಸಾಹಸಕ್ಕೆ ಮುಂದಾಗುವ ಸಾಧ್ಯತೆಯೇ ಇಲ್ಲಿ ಹೆಚ್ಚು.

ಈ ಹಿಂದೆ ನಾಗಮಂಗಲ ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದ ಕೇಂದ್ರ ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿ ಲಕ್ಷ್ಮೀ ಅಶ್ವಿ‌ನ್‌ಗೌಡ ಈ ಬಾರಿ ಜೆಡಿಎಸ್‌ ಟಿಕೆಟ್‌ಗಾಗಿ ಪ್ರಬಲ ಪೈಪೋಟಿ ನಡೆಸಿದ್ದಾರೆ. ಮಾಜಿ ಶಾಸಕ ಎಲ್‌.ಆರ್‌.ಶಿವರಾಮೇಗೌಡ, ಮಂಡ್ಯ ವಿಧಾನಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದ ಡಾ.ಕೃಷ್ಣ ಅವರೂ ರೇಸ್‌ನಲ್ಲಿದ್ದಾರೆ. ಉಳಿದಂತೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರ ಪುತ್ರ ಸಂತೋಷ, ಎಚ್‌.ಡಿ.ಕುಮಾರಸ್ವಾಮಿಯವರ ಪುತ್ರ ನಿಖೀಲ್‌ ಕುಮಾರಸ್ವಾಮಿ ಹೆಸರುಗಳೂ ಚಾಲ್ತಿಯಲ್ಲಿವೆ.

ಆದರೆ, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಿಗೆ ಡಿಮ್ಯಾಂಡ್‌ ಸೃಷ್ಟಿಯಾಗಿಲ್ಲ. 2018ರ ವಿಧಾನಸಭಾ ಚುನಾವಣೆಯಲ್ಲೇ ನಿವೃತ್ತಿ ಘೋಷಿಸಿರುವ ಅಂಬರೀಶ್‌, ಕೇಂದ್ರ ರಾಜಕಾರಣ ದತ್ತ ಮುಖ ಮಾಡುವ ಸಾಧ್ಯತೆಗಳಿಲ್ಲ. ಮಾಜಿ ಸಂಸದೆ ರಮ್ಯಾ ಸ್ಪರ್ಧೆ ಕೂಡಾ ಅನುಮಾನ. ಮಾಜಿ ಶಾಸಕ ಎನ್‌.ಚೆಲುವರಾಯಸ್ವಾಮಿ ಲೋಕ ಸಭಾ ಉಪ ಚುನಾವಣಾ ಸ್ಪರ್ಧೆಗೆ ಈಗಾಗಲೇ ಬಹಿರಂಗವಾಗಿ ನಿರಾಸಕ್ತಿ ಪ್ರದರ್ಶಿಸಿದ್ದಾರೆ.

ಇನ್ನು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ಜಿಲ್ಲೆಯಲ್ಲೇ ಬಿಜೆಪಿಗೆ ಠೇವಣಿ ಉಳಿಸಿಕೊಳ್ಳುವಲ್ಲಿ ಸಫಲವಾಗಿರುವ ಕ್ಷೇತ್ರ ಮಂಡ್ಯ. ಪಕ್ಷದಿಂದ ಚಂದ ಗಾಲು ಶಿವಣ್ಣ , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ರೈತಪರ ಹೋರಾಟಗಾರ ಶ್ರೀರಂಗಪಟ್ಟಣದ ಪರಾಜಿತ ಅಭ್ಯರ್ಥಿ ಕೆ.ಎಸ್‌.ನಂಜುಂಡೇಗೌಡ, ಶಾಸಕ ಆರ್‌.ಅಶೋಕ್‌ ಅವರ ಹೆಸರುಗಳು ರೇಸ್‌ನಲ್ಲಿವೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.