ಲೋಕಸಭಾ ಉಪಚುನಾವಣೆ ಅನಗತ್ಯವಾಗಿತ್ತು : ಬಿಎಸ್ವೈ ಅಸಮಾಧಾನ
Team Udayavani, Oct 7, 2018, 2:05 PM IST
ಬೆಂಗಳೂರು : ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಚುನಾವಣಾ ಆಯೋಗದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.
ಭಾನುವಾರ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ಅವರು ನಾವು ಉಪಚುನಾವಣೆ ಇರುವುದಿಲ್ಲ ಎಂದು ಭಾವಿಸಿದ್ದೆವು. ಕೇವಲ 5 ತಿಂಗಳಿಗಾಗಿ ಚುನಾವಣೆ ನಡೆಸಬೇಕಾಗಿದೆ. ಯಾವುದೇ ಪಕ್ಷದವರಿಗೂ ಚುನಾವಣೆ ಬಗ್ಗೆ ಆಸಕ್ತಿಯೇ ಇಲ್ಲ ವಾಗಿದೆ.ಅನೀವಾರ್ಯವಾಗಿ ಚುನಾವಣಾ ಆಯೋಗದ ಕ್ರಮವನ್ನು ಸ್ವಾಗತಿಸಬೇಕಾಗಿದೆ ಎಂದರು.
ಶಿವಮೊಗ್ಗದ ಅಭ್ಯರ್ಥಿಯನ್ನು ಇಂದು ಅಂತಿಮಗೊಳಿಸುತ್ತೇವೆ. ನಾಳೆ ಮಂಡ್ಯ ಮತ್ತು ಬಳ್ಳಾರಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ ಎಂದರು.
ಚುನಾವಣೆ ಅಗತ್ಯವಿತ್ತೆ?
ನವೆಂಬರ್ 6 ರಂದು ಮತ ಎಣಿಕೆಯಲ್ಲಿ ಆಯ್ಕೆಯಾಗುವ ಕರ್ನಾಟಕದ ಮೂರು ಲೋಕಸಭಾ ಸದಸ್ಯರ ಅವಧಿ ಎಷ್ಟಿರುತ್ತದೆ? ಗರಿಷ್ಟ 4 ತಿಂಗಳು. ಉಪಚುನಾವಣೆ ಅಗತ್ಯವಿತ್ತೇ? ಎಂದು ಬಿಜೆಪಿ ನಾಯಕ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ನ. 3 ರಂದು ಕರ್ನಾಟಕ ದಲ್ಲಿನ ಮೂರು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನ ಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳ ಫಲಿತಾಂಶ ನ. 6ಕ್ಕೆ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ