CONNECT WITH US  

ರಸ್ತೆ ಬದಿ ನಿಂತಿದ್ದವರ ಮೇಲೆ ಯಮನಂತೆ ಎರಗಿದ ಲಾರಿ ;ಮೂವರ ದುರ್ಮರಣ 

ಜೇವರ್ಗಿಯಲ್ಲಿ  ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತ

ಕಲಬುರಗಿ: ಜೇವರ್ಗಿಯ ಜೀರಟಗಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಸ್ತೆ ಬದಿಯಲ್ಲಿ  ನಿಂತಿದ್ದವರ ಮೇಲೆ ಯಮನಂತೆ ಬಂದೆರಗಿದ ಲಾರಿ ಹರಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮೃತ ದುರ್‌ದೈವಿಗಳು ಕೆಲಸಕ್ಕೆ ತೆರಳಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಅವಘಡ ನಡೆದಿದೆ. 

ಮೃತ ದುರ್ದೈವಿಗಳು ಜೇರಟಗಿ ಗ್ರಾಮದ ಶ್ರೀಕಾಂತ್ ಬಡಿಗೇರ್ (25), ಮೋಹಿದ್ (18) ಮತ್ತು ಉತ್ತರ ಪ್ರದೇಶ ಮೂಲದ ಪಾನಿಪುರಿ ವ್ಯಾಪಾರಿ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು  ಜೇವರ್ಗಿ ಮತ್ತು ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ನೇಲೋಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಘಟನೆ ಬಳಿಕ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿ ರಸ್ತೆಯನ್ನು ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 


Trending videos

Back to Top