ರಾಮನಗರ:ಕೈ ಕಾರ್ಯಕರ್ತರಲ್ಲಿ ತಳಮಳ; ಬಂಡಾಯದ ಮುನ್ಸೂಚನೆ
Team Udayavani, Oct 11, 2018, 4:31 PM IST
ರಾಮನಗರ: ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ವಿಚಾರದಲ್ಲಿ ರಾಮನಗರ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಕೈ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಗುರುವಾರ ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ರಾಮನಗರದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಚೇರಿಗೆ ನುಗ್ಗಿದ ಕೆಲವರು ಪೀಠೊಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ಇಕ್ಬಾಲ್ ಹುಸೇನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದು, ಮೈತ್ರಿ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರ ಧೋರಣೆಯ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.
ಸಿ.ಎಂ.ಲಿಂಗಪ್ಪ ಅಸಮಾಧಾನ
ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರು ತೀವ್ರ ಅಸಮಾಧಾನ ಹೊರ ಹಾಕಿದ್ದು , ಡಿ.ಕೆ.ಶಿವಕುಮಾರ್ ಅವರ ವಿರುದ್ದವೂ ಧ್ವನಿ ಎತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಶಿವಕುಮಾರ್ ಅವರು ಹುಲಿಯಂತಿದ್ದರು. ಈಗ ಸಂದರ್ಭದ ಶಿಶುವಾಗಿದ್ದಾರೆ ಎಂದರು.
ಎಲ್ಲಿಯಾದರು ನನ್ನ ಪುತ್ರ ಚಂದ್ರಶೇಖರ್ ಬಿಜೆಪಿಯಿಂದ ಕಣಕ್ಕಿಳಿದರೆ ನಾನೇ ಆತನ ವಿರುದ್ಧ ಸ್ಪರ್ಧಿಸುತ್ತೇನೆ ಎಂದು ಲಿಂಗಪ್ಪ ಹೇಳಿದರು.
ನವೆಂಬರ್ 3 ರಂದು ರಾಮನಗರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ