CONNECT WITH US  

ಮಂಡ್ಯಕ್ಕೆ ಬಿಜೆಪಿ ಅಭ್ಯರ್ಥಿ ಫೈನಲ್:ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್

ಮಾಜಿ ಶಾಸಕರ ಪುತ್ರನಿಗೆ ಟಿಕೆಟ್‌;ಬಿಜೆಪಿಯಲ್ಲಿ ಅಸಮಾಧಾನ

ಬೆಂಗಳೂರು: ಬಿಜೆಪಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದು, ಒಕ್ಕಲಿಗ ಸಮುದಾಯದ ನಾಯಕ ಡಾ.ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಘೋಷಣೆ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಮಾಜಿ ಶಾಸಕ ದೊಡ್ಡಬೋರೆಗೌಡ ಅವರ ಪುತ್ರರಾಗಿರುವ ನಿವೃತ್ತ ಹೆಚ್ಚುವರಿ ವಾಣಿಜ್ಯ ತೆರಿಗೆ ಅಧಿಕಾರಿ ಡಾ.ಸಿದ್ದರಾಮಯ್ಯ ಅವರು ಗುರುವಾರವಷ್ಟೇ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ. ಮಾಜಿ ಡಿಸಿಎಂ ಆರ್‌.ಅಶೋಕ್‌ ಅವರು ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.  

ಬಿಜೆಪಿಯಲ್ಲಿ ಅಸಮಾಧಾನ 

ಪಕ್ಷ ಸೇರ್ಪಡೆಯಾದ 5 ನಿಮಿಷದಲ್ಲಿ ಟಿಕೆಟ್‌ ನೀಡಿದುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ ಎಂದು ತಿಳಿದು ಬಂದಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ  ಮಾಜಿ ಶಾಸಕ ಅಶ್ವಥ್‌ನಾರಾಯಣ ಗೌಡ ಅವರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. 

ಚುನಾವಣೆಯನ್ನು ವೆಚ್ಚವನ್ನು ಭರಿಸುವಲ್ಲಿ ಡಾ.ಸಿದ್ದರಾಮಯ್ಯ ಅವರು ಸಮರ್ಥರಿರುವ ಹಿನ್ನಲೆಯಲ್ಲಿ ಟಿಕೆಟ್‌ ನೀಡಲಾಗಿದೆ ಎಂದು ಹೇಳಲಾಗಿದೆ. 


Trending videos

Back to Top