ಉಪ ಚುನಾವಣೆಯಲ್ಲಿ ಬಂಡಾಯವೆದ್ದರೆ ಶಿಸ್ತು ಕ್ರಮ:ದಿನೇಶ್ ಗುಂಡೂರಾವ್
Team Udayavani, Oct 12, 2018, 9:58 AM IST
ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದ್ದು, ಪಕ್ಷದಲ್ಲಿ ಬಂಡಾಯ ಎದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಈಗಾಗಲೇ ಹೇಳಿದ್ದೇವೆ. ಅದನ್ನು ಮೀರಿ ಬಂಡಾಯ ಎದ್ದರೆ ಪಕ್ಷ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಬಳ್ಳಾರಿಯಲ್ಲಿ ಅನೇಕ ಆಕಾಂಕ್ಷಿಗಳಿದ್ದಾರೆ. ಅನೇಕ ಶಾಸಕರು ಬೇರೆ ಊರುಗಳಿಗೆ ಹೋಗಿರುವುದರಿಂದ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿರುವುದರಿಂದ ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೂ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಶಿವಮೊಗ್ಗದಲ್ಲಿ ಅಭ್ಯರ್ಥಿ ಕೊರತೆಯಿಲ್ಲ. ಮೂರು ನಾಲ್ಕು ತಿಂಗಳಿಗೆ ಚುನಾವಣೆ ಎದುರಿಸಲು ಕೆಲವರಿಗೆ ಆತಂಕ ಇದೆ. ಆದರೆ, ಪಕ್ಷ ಹೇಳಿದರೆ ಸ್ಪರ್ಧಿಸಲು ಯಾರೂ ನಿರಾಕರಿಸವುದಿಲ್ಲ. ಶಿವಮೊಗ್ಗದಲ್ಲಿ ಎಲ್ಲ ಹಂತದಲ್ಲಿಯೂ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಬಿಜೆಪಿಗೆ ನೇರ ಸ್ಪರ್ಧೆಯೊಡ್ಡುವ ಶಕ್ತಿ ಇದೆ ಎಂದು ಹೇಳಿದರು.
ಮಧು ಬಂಗಾರಪ್ಪ ಕೂಡ ಜೆಡಿಎಸ್ನ ಹಿರಿಯ ನಾಯಕ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಅವರ ಸ್ಪರ್ಧೆಯ ಬಗ್ಗೆ ಚರ್ಚೆಯಾಗಿಲ್ಲ. ಅವರು ವಿದೇಶದಿಂದ ಬಂದ ನಂತರ ಚರ್ಚಿಸುತ್ತೇವೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ನಿಂದ ಮಾತ್ರವೇ ಬಿಜೆಪಿ ಎದುರಿಸಲು ಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್