CONNECT WITH US  

ಧರ್ಮಸ್ಥಳ, ಶೃಂಗೇರಿಗೆ ಅನಿತಾ ಕುಮಾರಸ್ವಾಮಿ;ಗೆಲುವಿಗಾಗಿ ವಿಶೇಷ ಪೂಜೆ 

ಬೆಳ್ತಂಗಡಿ/ಶೃಂಗೇರಿ : ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶೃಂಗೇರಿಯಲ್ಲಿ ವಿಶೇಷ ಪೂಜೆಗಳಲ್ಲಿ ಭಾಗಿಯಾಗುತ್ತಿದ್ದಾರೆ. 

ರಾಮನಗರ ಉಪಚುನಾವಣೆಯ ಜೆಡಿಎಸ್‌ ಅಭ್ಯರ್ಥಿಯಾಗಿರುವ ಅನಿತಾ ಅವರು ಹೆಲಿಕ್ಯಾಪ್ಟರ್‌ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದು ಬೆಳಗ್ಗೆ ವಿಶೇಷ ಪೂಜೆಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಯ ಬಳಿಕ ಅವರು ಹೆಲಿಕ್ಯಾಪ್ಟರ್‌ ಮೂಲಕ ಶೃಂಗೇರಿಗೆ ತೆರಳಿ ನವರಾತ್ರಿ ಸಂದರ್ಭದ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. 

ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಅನಿತಾ ಕುಮಾರಸ್ವಾಮಿ ಅವರು ದೇಗುಲಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರದ ಉಳಿವಿಗಾಗಿ ಮತ್ತು ರಾಮನಗರ ಚುನಾವಣೆಯಲ್ಲಿ ಭರ್ಜರಿ ಗೆಲುವಿಗಾಗಿ ಪೂಜೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. 

ರಾಮನಗರದಲ್ಲಿ ಆಕ್ರೋಶ 
ಅಭ್ಯರ್ಥಿ ಎಂದು ಬಿಂಬಿತವಾದರೂ ರಾಮನಗರಕ್ಕೆ ಆಗಮಿಸದೇ ಇರುವುದರ ವಿರುದ್ದ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅನಿತಾ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ದಿನದಂದೆ ರಾಮನಗರಕ್ಕೆ ಆಗಮಿಸಲಿದ್ದಾರೆ ಎನ್ನುವ ವಿಚಾರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.  


Trending videos

Back to Top