CONNECT WITH US  

ಮಸ್ಕಿ: ಅಂಗಡಿಯೊಳಗೆ ಗ್ಯಾಸ್‌ ಸಿಲಿಂಡರ್‌ ಸ್ಫೋಟ ; ಭಾರೀ ಬೆಂಕಿ

ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ರಾಯಚೂರು: ಮಸ್ಕಿಯಲ್ಲಿ  ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ನಡೆದಿದ್ದು  ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳು ಬೆಂಕಿಗೆ ಆಹುತಿಯಾಗಿವೆ.

ಅಮರೇಶ್ವರ ಸಪ್ಲಯರ್ಸ್‌ ಎನ್ನುವ ಅಂಗಡಿಯಲ್ಲಿ  ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು ಅಪಾರ ನಷ್ಟ ಸಂಭವಿಸಿದೆ.

ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೆ ವ್ಯಾಪಿಸುವುದನ್ನು ತಡೆದಿದ್ದಾರೆ. 

ಮಸ್ಕಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 


Trending videos

Back to Top