ಕದನ “ಕುತೂಹಲ’; ಬಳ್ಳಾರಿ, ಶಿವಮೊಗ್ಗ, ಜಮಖಂಡಿಯಲ್ಲಿ ನಾಮಪತ್ರ


Team Udayavani, Oct 17, 2018, 6:00 AM IST

12.jpg

ಬೆಂಗಳೂರು: ಐದು ಕ್ಷೇತ್ರಗಳ ಉಪ ಚುನಾವಣೆ ಕಣ ಸ್ಪಷ್ಟಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಶಿವಮೊಗ್ಗ, ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರಗಳಲ್ಲಿ ಘಟಾನುಘಟಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌-ಕಾಂಗ್ರೆಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ, ಬಳ್ಳಾರಿ ಕ್ಷೇತ್ರದಿಂದ ವಿ.ಎಸ್‌.ಉಗ್ರಪ್ಪ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಜೆ.ಶಾಂತಾ, ಜಮಖಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಶ್ರೀಕಾಂತ್‌ ಕುಲಕರ್ಣಿ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆನಂದ್‌ ನ್ಯಾಮಗೌಡ ನಾಮಪತ್ರ ಸಲ್ಲಿಸಿದರು.

ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ನಾಮ ಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ, ಸಚಿವ ಆರ್‌.ವಿ.ದೇಶಪಾಂಡೆ ಸಾಥ್‌ ನೀಡಿದರೆ, ಬಳ್ಳಾರಿಯಲ್ಲಿ  ಉಗ್ರಪ್ಪ  ನಾಮಪತ್ರ ಸಲ್ಲಿಕೆಗೆ ಸಚಿವ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಾಥ್‌ ನೀಡಿದರು. ಜಮಖಂಡಿಯಲ್ಲಿ ಕಾಂಗ್ರೆಸ್‌ನ ಆನಂದ್‌ ನ್ಯಾಮಗೌಡ ನಾಮಪತ್ರ ಸಲ್ಲಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ಜತೆಗೂಡಿ ದ್ದರು. ಬಳ್ಳಾರಿಯಲ್ಲಿ ಜೆ.ಶಾಂತಾ ನಾಮಪತ್ರ ಸಲ್ಲಿಕೆಗೆ ಶ್ರೀರಾಮುಲು ಸಹಿತ ಬಿಜೆಪಿ ನಾಯಕರು ಸಾಥ್‌ ನೀಡಿದರು. ನಾಮಪತ್ರ ಸಲ್ಲಿಕೆ ಅನಂತರ ಬಳ್ಳಾರಿ, ಶಿವಮೊಗ್ಗ, ಜಮಖಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಾಯಕರು ಪ್ರಚಾರಕ್ಕೂ ಚಾಲನೆ ನೀಡಿದರು. ಆರೋಪ- ಪ್ರತ್ಯಾರೋಪಗಳ ಸುರಿಮಳೆಯೂ ಆಯಿತು.

ಈ ಮಧ್ಯೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ವಂಚಿತರಾಗಿ ಬಳಿಕ ಪಕ್ಷೇತರರಾಗಿ ಕಣಕ್ಕಿಳಿದು ಸೋಲು ಅನುಭವಿಸಿದ್ದ ತಿಪ್ಪೇಸ್ವಾಮಿ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನ ತಂತ್ರ ವಾಗಿ ಬಿಜೆಪಿ ಮತ ಚದುರಿಸಲು ತಿಪ್ಪೇಸ್ವಾಮಿ ನಾಮ ಪತ್ರ ಸಲ್ಲಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಚಂದ್ರಶೇಖರ್‌ ಸೋಮವಾರ ನಾಮಪತ್ರ ಸಲ್ಲಿಸಿದ್ದರು. ಮಂಡ್ಯದಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಎಲ್‌.ಆರ್‌.ಶಿವರಾಮೇಗೌಡ, ಬಿಜೆಪಿಯಿಂದ ಡಾ| ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದರು. ಒಟ್ಟಾರೆ, ನ.3ರಂದು ಉಪ ಚುನಾವಣೆ ನಡೆಯಲಿದ್ದು, ಐದೂ ಕ್ಷೇತ್ರಗಳ ಕಣ ಸ್ಪಷ್ಟಗೊಂಡಿದೆ.

ಶಿವಮೊಗ್ಗದಲ್ಲಿ  ಜೆಡಿಯುನಿಂದ ಮಾಜಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರ ಪುತ್ರ ಮಹಿಮಾ ಪಟೇಲ್‌ ಸಹ ನಾಮಪತ್ರ ಸಲ್ಲಿಸಿರುವುದರಿಂದ ಮೂವರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಹೋರಾಟ ಎಂಬಂತಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.