ಸಡಗರದ ನವರಾತ್ರಿ ಸಂಪನ್ನ

Team Udayavani, Oct 20, 2018, 6:40 AM IST

kollura.jpg

ಬೆಂಗಳೂರು: ಕೊಲ್ಲೂರು, ಶೃಂಗೇರಿ, ಸವದತ್ತಿ ಸೇರಿ ರಾಜ್ಯದೆಲ್ಲೆಡೆಯ ಶಕ್ತಿ ಕೇಂದ್ರಗಳಲ್ಲಿ ಶುಕ್ರವಾರ ಭಕ್ತಿ, ಸಡಗರದಿಂದ ವಿಜಯದಶಮಿ ಆಚರಿಸಲಾಯಿತು. ಇದರೊಂದಿಗೆ ನವರಾತ್ರಿ ಉತ್ಸವಕ್ಕೆ ತೆರೆ ಬಿತ್ತು. ಈ ಮಧ್ಯೆ, ಗುರುವಾರ ಎಲ್ಲೆಡೆ ಆಯುಧಪೂಜೆ ನೆರವೇರಿಸಲಾಯಿತು.

ಕೊಲ್ಲೂರಲ್ಲಿ ಅಕ್ಷರಭ್ಯಾಸ:
ಶಕ್ತಿದೇವತೆಯ ಕೇಂದ್ರ ಕೊಲ್ಲೂರಿನಲ್ಲಿ ಶುಕ್ರವಾರ ವಿಜಯದಶಮಿ ಪ್ರಯುಕ್ತ ಸರಸ್ವತಿ ಮಂಟಪ ಹಾಗೂ ಚಂಡಿಕಾ ಯಾಗದ ಹೊರ ಪೌಳಿಯಲ್ಲಿ ಅಕ್ಷರಾಭ್ಯಾಸಕ್ಕೆ ಸಹಸ್ರಾರು ಮಕ್ಕಳು ಪೋಷಕರೊಡನೆ ಆಗಮಿಸಿದ್ದರು. ಮಕ್ಕಳ ನಾಲಗೆಯ ಮೇಲೆ ಚಿನ್ನದ ನಾಣ್ಯದಲ್ಲಿ ಓಂಕಾರ ಬರೆಯಲಾಯಿತು. ಅಕ್ಕಿಯಲ್ಲಿ ಕೂಡ ವಿದ್ಯಾರಂಭ ನಡೆಯಿತು. ಈ ಮಧ್ಯೆ, ಗುರುವಾರ ಮೂಕಾಂಬಿಕಾ ದೇಗುಲದಲ್ಲಿ ಚಂಡಿಕಾಯಾಗ ಹಾಗೂ ರಥೋತ್ಸವ ನಡೆಯಿತು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಜಯಘೋಷದೊಂದಿಗೆ ರಥೋತ್ಸವದಲ್ಲಿ ಪಾಲ್ಗೊಂಡರು.

ಶತಚಂಡಿಯಾಗ ಸಂಪನ್ನ
ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಶೃಂಗೇರಿ ಶ್ರೀ ಶಾರದಾಂಬೆಗೆ ಸಿಂಹವಾಹನ ಅಲಂಕಾರ ಮಾಡಲಾಗಿತ್ತು. ಮಠದಲ್ಲಿ ಅ.14 ಪಂಚಮಿಯಿಂದ ಆರಂಭವಾಗಿದ್ದ ಶತಚಂಡಿಯಾಗ ಸಂಪನ್ನಗೊಂಡಿತು. ತಾಯಿ ಶಾರದೆಯು ಸಿಂಹವಾಹನವನ್ನೇರಿ ಕೈಯಲ್ಲಿ ತ್ರಿಶೂಲ ಧರಿಸಿ, ಚಂಡ ಮುಂಡಾದಿ ದುಷ್ಟ ದೈತ್ಯರನ್ನು ಸಂಹರಿಸಿ, ಶಿಷ್ಟ ರಕ್ಷಣೆಗಾಗಿ ಚಾಮುಂಡಿ ಅವತಾರದಲ್ಲಿ ಭಕ್ತರನ್ನು ಅನುಗ್ರಹಿಸಿದಳು. ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಗುರುಪಾದುಕೆ ಶ್ರೀ ಚಕ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಶಾರದಾಂಬೆಗೆ ಶ್ರೀ ಸೂಕ್ತ ಪುಷ್ಪಾರ್ಚನೆ ಸಲ್ಲಿಸಿದರು. ನಂತರ, ಮಠದ ಯಾಗಶಾಲೆಯಲ್ಲಿ ಐದು ದಿನದಿಂದ ನಡೆಯುತ್ತಿರುವ ಶತಚಂಡಿ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು. ಶತಚಂಡಿಯಾಗದ ಭಾಗವಾಗಿ ಶ್ರೀಮಠದ ಅರ್ಚಕರಾದ ನಾಗರಾಜ ಭಟ್‌ ನೇತೃತ್ವದ ಹತ್ತು ಜನ ಋತ್ವಿಜರು ದುರ್ಗಾ ಸಪ್ತಶತಿ ಪಾರಾಯಣ ಪಠಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.