ಶ್ರೀರಾಮಸೇನೆ ದತ್ತಮಾಲಾ ಅಭಿಯಾನಕ್ಕೆ ಚಾಲನೆ
Team Udayavani, Oct 23, 2018, 6:00 AM IST
ಚಿಕ್ಕಮಗಳೂರು: ಶ್ರೀರಾಮಸೇನೆ ಹಮ್ಮಿಕೊಂಡಿರುವ 13ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಸೋಮವಾರ ರಾಜ್ಯಾದ್ಯಂತ ಚಾಲನೆ ಸಿಕ್ಕಿದೆ.
ನಗರದ ರತ್ನಗಿರಿ ರಸ್ತೆಯ ಶ್ರೀ ಕಾಮಧೇನು ಗಣಪತಿ ದೇಗುಲದಲ್ಲಿ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಉಪಾಧ್ಯಕ್ಷ ಕೆ.ವಿ. ಮಹೇಶ್ಕುಮಾರ್ ದತ್ತಮಾಲೆ ಧರಿಸಿ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ದತ್ತಾತ್ರೇಯರ ಪೂಜೆ ಬಳಿಕ 40ಕ್ಕೂ ಹೆಚ್ಚು ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿದರು. ದತ್ತಮಾಲಾ ಅಭಿಯಾನ ಅ.28ರವರೆಗೆ ನಡೆಯಲಿದ್ದು, ಅ.28 ರಂದು ರಾಜ್ಯಾದ್ಯಂತ ದತ್ತಮಾಲೆ ಧರಿಸಿರುವ ಶ್ರೀ ರಾಮಸೇನೆ ಕಾರ್ಯಕರ್ತರು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ. ನಂತರ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಇದರಲ್ಲಿ ವಿವಿಧ ಮಠಾಧೀಶರು, ಶ್ರೀ ರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಪಾಲ್ಗೊಳ್ಳಲಿದ್ದಾರೆ. ಬಳಿಕ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ಪಾದುಕೆಗಳ ದರ್ಶನ ಪಡೆದು ಮಾಲೆ ವಿಸರ್ಜಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ