ರಾಹುಲ್ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ:ಖರ್ಗೆ
Team Udayavani, Oct 24, 2018, 6:00 AM IST
ಕಲಬುರಗಿ: ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಲ್ಲ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು
ಗೊತ್ತಾಗುತ್ತಿಲ್ಲ. ಈ ವಿಷಯದಲ್ಲಿ ಸದ್ಯಕ್ಕೆ ಯಾವುದೇ ಗೊಂದಲ ಬೇಡ. ಚುನಾವಣೆಗೆ ಮುಂಚೆ ಈ ವಿಷಯ ಅಪ್ರಸ್ತುತ. ಕಾಂಗ್ರೆಸ್ ಪೂರ್ಣ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಅವರೇ ಪ್ರಧಾನಿ ಆಗುತ್ತಾರೆ ಎನ್ನುವ ನಂಬಿಕೆ ತಮ್ಮದು ಎಂದರು.
ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯ ತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಎಲ್ಲ ಪಕ್ಷದವರು ಸೇರಿ ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಎದುರಿಸಬೇಕೆನ್ನುವ ವಿಚಾರವಿದೆ. ನಂತರ, ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದವರೆಗೆ ಯಾರಿಗೆ ಬೆಂಬಲವಿರುತ್ತದೆಯೋ ಅವರು ಪ್ರಧಾನಿಯಾಗುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ