ಇನ್ನೆರಡು ದಿನ ಮಳೆ ಸಾಧ್ಯತೆ
Team Udayavani, Oct 25, 2018, 6:05 AM IST
ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಯಿತು. ಕಲಬುರಗಿ ಜಿಲ್ಲೆಯ ಸುಳೇಪೇಟೆಯಲ್ಲಿ 2 ಸೆಂ. ಮೀ.ಮಳೆ ಸುರಿಯಿತು.
ಉಳಿದಂತೆ, ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 35.4 ಡಿ.ಸೆ.ಮತ್ತು ಚಾಮರಾಜನಗರದಲ್ಲಿ ರಾಜ್ಯದಲ್ಲಿಯೇ ಕನಿಷ್ಠ 13.1 ಡಿ.ಸೆ.ತಾಪಮಾನ ದಾಖಲಾಯಿತು. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.