ಬಿಜೆಪಿಗೆ ಕಾಂಗ್ರೆಸ್‌, ಜೆಡಿಎಸ್‌ “ಕೋಲ್‌’ ಏಟು!

Team Udayavani, Oct 26, 2018, 6:15 AM IST

congress-bjp-jds-elecetion.jpg

ರಾಯಚೂರು:ರಾಜ್ಯದಲ್ಲಿ ಲೋಕಸಭೆ, ವಿಧಾನ ಸಭೆಗಳ ಐದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ವೇಳೆಯೇ ಉಂಟಾಗಿರುವ ಕಲ್ಲಿದ್ದಲು ಕೊರತೆ ಕಾಂಗ್ರೆಸ್‌, ಜೆಡಿಎಸ್‌ಗೆ ಬಿಜೆಪಿ ವಿರುದ್ಧ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಈ ವಿಚಾರವನ್ನಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಉಭಯ ಪಕ್ಷದ ನಾಯಕರು ಹರಿಹಾಯುತ್ತಿದ್ದಾರೆ.

ಮೂಲಗಳ ಪ್ರಕಾರ ಕಲ್ಲಿದ್ದಲು ಕೊರತೆ ಕೇವಲ ಕರ್ನಾಟಕ ಮಾತ್ರವಲ್ಲದೇ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಇದೆ. ಆದರೆ, ಜೆಡಿಎಸ್‌, ಕಾಂಗ್ರೆಸ್‌ ನಾಯಕರು ಮಾತ್ರ ಕೇಂದ್ರ ಸರ್ಕಾರದ ವಿರುದ್ಧ ಗುಡುಗುತ್ತಿದ್ದಾರೆ. ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಕಲ್ಲಿದ್ದಲು ಕೊರತೆಗೆ ಕೇಂದ್ರ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯಕ್ಕೆ ಶೇ.50ಕ್ಕಿಂತ ಹೆಚ್ಚು ವಿದ್ಯುತ್‌ನ್ನು ಶಾಖೋತ್ಪನ್ನ ಕೇಂದ್ರಗಳಿಂದ ಪಡೆಯುತ್ತಿರುವ ಕಾರಣ ಕಲ್ಲಿದ್ದಲು ಕೊರತೆಯಾದಲ್ಲಿ ಸಹಜವಾಗಿಯೇ ರಾಜ್ಯಕ್ಕೆ ಬಿಸಿ ತಟ್ಟಲಿದೆ. ಆದರೆ, ಕಲ್ಲಿದ್ದಲು ಗಣಿ ಕಂಪನಿಗಳ ಜತೆಗಿನ ಒಪ್ಪಂದದಲ್ಲಿ ಈ ಹಿಂದೆಯೇ ಕೆಲ ಸಮಸ್ಯೆಗಳು ತಲೆದೋರಿತ್ತು. ಲಿಂಕೇಜ್‌ ಮೂಲಕ ಕೋಲ್‌ ನೀಡುತ್ತಿರುವ ಕಾರಣ ಯಾವ ಕ್ಷಣದಲ್ಲಾದರೂ ಪೂರೈಕೆ ಸ್ಥಗಿತ ಮಾಡಬಹುದು. ಇಲ್ಲವೇ ದುಬಾರಿ ದರಕ್ಕೆ ಖರೀದಿಸಿ ಎಂಬಂರ್ಥದಲ್ಲಿ ಗಣಿ ಕಂಪನಿಗಳು ತಗಾದೆ ತೆಗೆದಿದ್ದವು.

ಆರ್‌ಟಿಪಿಎಸ್‌ ನಾಲ್ಕು ಘಟಕ ಬಂದ್‌:
ಆರ್‌ಟಿಪಿಎಸ್‌ ಎಲ್ಲ ಘಟಕಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕಾದರೆ ನಿತ್ಯ 25 ಸಾವಿರ ಮೆಟ್ರಿಕ್‌ ಟನ್‌ ಕಲ್ಲಿದ್ದಲು ಅಗತ್ಯವಿದೆ. ಆದರೆ, ಈಗ 10-12 ಮೆಟ್ರಿಕ್‌ ಟನ್‌ ಮಾತ್ರ ಬರುತ್ತಿದೆ. ಇದರಿಂದ ಎಂಟು ಘಟಕಗಳಲ್ಲಿ ನಾಲ್ಕು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ ನಾಲ್ಕರಲ್ಲಿ ಆರನೇ ಘಟಕವನ್ನು ವಾರ್ಷಿಕ ದುರಸ್ತಿಗೆ ಪಡೆದಿದ್ದು, ಮೂರು ಸ್ಥಗಿತಗೊಂಡಿವೆ. ಉಳಿದ ನಾಲ್ಕು ಘಟಕಗಳಿಂದ 740 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ.

1600 ಮೆಗಾವ್ಯಾಟ್‌ ಸಾಮರ್ಥ್ಯದ ವೈಟಿಪಿಎಸ್‌ನಲ್ಲೂ ಒಂದೇ ಘಟಕದಿಂದ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಅಲ್ಲಿಗೆ ಆರ್‌ಟಿಪಿಎಸ್‌ನಿಂದಲೇ ಕಲ್ಲಿದ್ದಲು ಪೂರೈಸಬೇಕಿದೆ. ಬುಧವಾರ ಆರ್‌ಟಿಪಿಎಸ್‌ಗೆ ನಾಲ್ಕು, ವೈಟಿಪಿಎಸ್‌ 1 ರೇಕ್‌ ಕಲ್ಲಿದ್ದಲು ಬಂದಿದೆ. ಮಳೆಗಾಲದಲ್ಲಿ ಜಲಮೂಲಗಳಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದ ಕಾರಣ ಆರ್‌ಟಿಪಿಎಸ್‌ನಲ್ಲಿ ಹಿಂದಿನ ತಿಂಗಳು 4.5ಲಕ್ಷ ಮೆಟ್ರಿಕ್‌ ಟನ್‌ ಸಂಗ್ರಹವಿತ್ತು. ಆದರೆ, ಕಲ್ಲಿದ್ದಲು ಅಗತ್ಯ ಇಲ್ಲದಿದ್ದರೂ ಸಂಗ್ರಹಿಸಲು ಸ್ಥಳಾಭಾವ ಸಮಸ್ಯೆ ಎದುರಾಗುವ ಕಾರಣ, ಅದು ಕಷ್ಟಸಾಧ್ಯ. ಕಲ್ಲಿದ್ದಲು ಸಮಸ್ಯೆ ವಾರದೊಳಗೆ ಇತ್ಯರ್ಥಗೊಳ್ಳುವ ಸಾಧ್ಯತೆಗಳಿವೆ ಎನ್ನುತ್ತಾರೆ ಅಧಿ ಕಾರಿಗಳು. ಒಂದು ವೇಳೆ ಹಾಗಾಗದಿದ್ದಲ್ಲಿ ರಾಜ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಅನಿವಾರ್ಯ.

ಮಳೆ, ತಿತ್ಲಿ ಚಂಡಮಾರುತ ಕಾರಣ:
ಕಲ್ಲಿದ್ದಲು ಪೂರೈಕೆ ಕೊರತೆಗೆ ಗಣಿ ಪ್ರದೇಶಗಳಲ್ಲಿ ಬೀಳುತ್ತಿರುವ ಮಳೆ, ತಿತ್ಲಿ ಚಂಡಮಾರುತ ಕಾರಣ ಎನ್ನಲಾಗುತ್ತಿದೆ. ಸತತ ಮಳೆಯಿಂದ ಉತ್ಪಾದನೆ ಕುಂಠಿತಗೊಂಡಿದ್ದರಿಂದ ಪೂರೈಕೆ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೇ, ರಾಜ್ಯದಲ್ಲಿ ಶಾಖೋತ್ಪನ್ನ ಕೇಂದ್ರಗಳು ಹೆಚ್ಚಾಗಿದ್ದು, ಪ್ರತ್ಯೇಕ ಗಣಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಿಂದಿನ ಸರ್ಕಾರವೇ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಬೇಡಿಕೆಗೆ ತಕ್ಕ ಗಣಿ ನೀಡದ ಕಾರಣ ನಾವು ಕಾದು ನೋಡುವ ತಂತ್ರ ಅನುಸರಿಸಿದೆವು ಎನ್ನುತ್ತಾರೆ ಅಧಿಕಾರಿಗಳು.

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.