ನಾನು ಅಷ್ಟು ಸುಲಭವಾಗಿ ಸಾಯಲ್ಲ: ಎಚ್ಡಿಕೆ 

Team Udayavani, Oct 29, 2018, 6:00 AM IST

z-9.jpg

ಶಿರಾಳಕೊಪ್ಪ: “ನಾನು ಅಷ್ಟು ಸುಲಭವಾಗಿ ಸಾಯುವುದಿಲ್ಲ. ಈ ರಾಜ್ಯದ ಜನರ ಸೇವೆ ಮಾಡಲು ನನಗೆ ಎರಡನೇ ಬಾರಿ ಜೀವ ಬಂದಾಗಿದೆ. ನನ್ನ ಆರೋಗ್ಯದ ವಿಚಾರದಲ್ಲಿ ಕೆ.ಎಸ್‌.ಈಶ್ವರಪ್ಪ ಸಲಹೆ ನೀಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸಮೀಪದ ಮಂಚಿಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಜೀವನದಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. ನನಗಾದ ನೋವನ್ನು ರಾಜ್ಯದ ಜನರ ಬಳಿ ತೋಡಿಕೊಂಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ಜತೆ ಇದ್ದ ಬಸವರಾಜ ಹೊರಟ್ಟಿ ಹಾಗೂ ಪುಟ್ಟರಾಜು ಅವರಿಗೆ ಮಾತ್ರ ನನಗೆ ಏನಾಗಿತ್ತು ಎಂಬುದು ಗೊತ್ತು’ ಎಂದರು. “ನಾನು ರಾಜ್ಯದ ರೈತರ ಸಾಲಮನ್ನಾ ಮಾಡುವುದಿಲ್ಲ
ಎಂದು ಎಲ್ಲಿಯೂ ಹೇಳಿಲ್ಲ. ಈಗಾಗಲೇ ಸಹಕಾರ ಬ್ಯಾಂಕಿನಲ್ಲಿರುವ ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಕೂಡ ಮನ್ನಾ ಮಾಡಲಾಗಿದೆ. ನ.1ರಂದು ರಾಜ್ಯದ ರೈತರಿಗೆ ಋಣಮುಕ್ತ ಪತ್ರವನ್ನು ಕಳುಹಿಸಲಾಗುತ್ತಿದೆ. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಾಲಮನ್ನಾ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ.

ಈಗಾಗಲೇ ರಾಷ್ಟ್ರೀಕೃತ ಬ್ಯಾಂಕುಗಳ ಜತೆ ಮಾತುಕತೆ ನಡೆಸಲಾಗಿದ್ದು, ಮುಂದಿನ ತಿಂಗಳ ಒಂದರಿಂದ ರಾಜ್ಯದ ಎಲ್ಲ ರೈತರಿಗೆ ಸಾಲಮನ್ನಾದ ಆದೇಶವನ್ನು ಕಳುಹಿಸಲಾಗುತ್ತಿದೆ’ ಎಂದರು. ಇಸ್ರೇಲ್‌ಗೆ ಪ್ರವಾಸಕ್ಕೆಂದು ಹೋಗಿರಲಿಲ್ಲ. ಅಲ್ಲಿಯ ಕೃಷಿ ಪದಟಛಿತಿಯನ್ನು ಅಧ್ಯಯನ ಮಾಡಿ, ರಾಜ್ಯದಲ್ಲಿ ಅಳವಡಿಸಲು ಹೋಗಿದ್ದೆ. ಇಸ್ರೇಲ್‌ ಪದಟಛಿತಿಯನ್ನು ನಮ್ಮ ರೈತರು ಅಳವಡಿಸಿಕೊಂಡರೆ ಅವರಿಗೆ ಕೃಷಿಯಲ್ಲಿ ಹೆಚ್ಚಿನ ಆದಾಯ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾಸಕಾಂಗ ಪಕ್ಷದ ನಾಯಕರಾಗಿರುವ ಯಡಿಯೂರಪ್ಪ ಸದನದಲ್ಲಿ ಯಾವ ರೀತಿಯ ಭಾಷೆ ಬಳಸಿದ್ದರು ಎಂಬುದನ್ನು ಬಿಜೆಪಿಯವರು ನೆನಪಿಸಿಕೊಳ್ಳಲಿ. ಈಶ್ವರಪ್ಪ ಮೊದಲು ಯಡಿಯೂರಪ್ಪಗೆ ಬುದ್ಧಿ ಹೇಳಲಿ. ನಂತರ, ನಾನು ಸಿದ್ದರಾಮಯ್ಯ ಅವರ ಜತೆ ಮಾತನಾಡುತ್ತೇನೆ.
● ಎಚ್‌.ಡಿ.ಕುಮಾರಸ್ವಾಮಿ, ಸಿಎಂ.

ಕುಮಾರಸ್ವಾಮಿ ಸಾಯೋ ಮಾತಾಡಬಾರದು
ಶಿವಮೊಗ್ಗ: “ಸಿಎಂ ಕುಮಾರಸ್ವಾಮಿ ಅವರ ಮೇಲೆ ನನಗೆ ವಿಶ್ವಾಸವಿದೆ. ಅವರು ಇನ್ನಷ್ಟು ಹೆಚ್ಚು ಕಾಲ ಬದುಕಲಿ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿ’ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಸಲಹೆ ನೀಡಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಮಾರಸ್ವಾಮಿಗೆ ಬರೆದ ಪತ್ರ ಬಿಡುಗಡೆ ಮಾಡಿದರು. “ಇಸ್ರೇಲ್‌ನಿಂದ ಬರುವಾಗ ಸಾಯುತ್ತಿದ್ದೆ ಎಂದು ಕುಮಾರಸ್ವಾಮಿ ಅವರು ಹೇಳಿರುವುದು ನನಗೆ ನೋವು ತಂದಿದೆ. ಅವರು ಈ ರೀತಿ ಹೇಳಿಕೆ ಕೊಡಬಾರದು. ರೈತರಿಗೆ, 
ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬಬೇಕು. ಸಾಲ ಮನ್ನಾ ಮಾಡಲಿ. ಆಗ ಜನರೇ ನಿಮಗೆ ಆಶೀರ್ವಾದ ಮಾಡುತ್ತಾರೆ. ಇನ್ನು 20, 30 ವರ್ಷಗಳ ಕಾಲ ಬಾಳಿ ಬದುಕಲಿ’ ಎಂದರು. 

ಕುಮಾರಸ್ವಾಮಿ ಶಿವಮೊಗ್ಗಕ್ಕೆ ಬರುತ್ತಿರುವುದು ಸಂತೋಷದ ವಿಷಯ. ಅವರು ಇಲ್ಲಿಂದ ಹೊರಡುವಷ್ಟರಲ್ಲಿ ನನ್ನ ಬಹಿರಂಗ ಪತ್ರಕ್ಕೆ ಸಾಧ್ಯವಾದರೆ ಉತ್ತರ ಕೊಟ್ಟರೆ ಸಂತೋಷ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಎರಡು ತಿಂಗಳಾಗಿದೆ. ಈವರೆಗೂ ಮೇಯರ್‌,ಉಪಮೇಯರ್‌, ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಆಗಿಲ್ಲ. ತಕ್ಷಣ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದರು.

ಕಣ್ಣೀರು ಹಾಕೋ ಮುಖ್ಯಮಂತ್ರಿ ಬೇಡ
ಶಿರಾಳಕೊಪ್ಪ: ರಾಜ್ಯಕ್ಕೆ ಬಡವರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಬೇಕೇ ವಿನಃ ಕಣ್ಣೀರು ಸುರಿಸುವ ಮುಖ್ಯಮಂತ್ರಿ ಬೇಡ ಎಂದು ಮಾಜಿ ಸಚಿವ, ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಛತ್ರದಹಳ್ಳಿಯ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಹೋದ ಕಡೆಯಲ್ಲೆಲ್ಲಾ ಕಣ್ಣೀರು ಹಾಕುತ್ತಾರೆ. ಆದರೆ, ರಾಜ್ಯಕ್ಕೆ ಬಡವರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಬೇಕೇ ವಿನಃ ಕಣ್ಣೀರು ಸುರಿಸುವ ಮುಖ್ಯಮಂತ್ರಿಯಲ್ಲ ಎಂದರು. ರೈತರ ಸಾಲಮನ್ನಾ ಮಾಡಿದ್ದೇವೆ ಎಂದು ಸರ್ಕಾರ ಸುಳ್ಳು ಪ್ರಚಾರ ಮಾಡುತ್ತಿದೆ. ಇದುವರೆಗೂ ಯಾವುದೇ ಸಾಲಮನ್ನಾ ಆಗಿಲ್ಲ. ರೈತರಿಗೆ ಕುಮಾರಸ್ವಾಮಿ ಸರ್ಕಾರ ಮಕ್ಮಲ್‌ ಟೋಪಿ ಹಾಕುವ ಕೆಲಸ ಮಾಡುತ್ತಿದೆ. ಲೋಕಸಭೆ ಉಪ ಚುನಾವಣೆ ಮುಗಿದು ಒಂದು ತಿಂಗಳಿನಲ್ಲಿ ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.