ಅಭಿವೃದ್ಧಿ ವಿಚಾರದಲ್ಲಿ ಭುಗಿಲೆದ್ದ ಮತದಾರರ ವ್ಯಾಪಕ ಆಕ್ರೋಶ 


Team Udayavani, Nov 1, 2018, 10:24 AM IST

b-51.jpg

ರಾಮನಗರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ವಿಚಾರದಲ್ಲಿ ಮತದಾರರ ತೀವ್ರ ಅಸಮಾಧಾನ, ಅಭ್ಯರ್ಥಿಯ ವಿಚಾರದಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರಲ್ಲಿರುವ ಅಸಮಾಧಾನಗಳ ನಡುವೆಯೂ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸವನ್ನು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರು ಇರಿಸಿಕೊಂಡಿದ್ದಾರೆ. 2018ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಎಚ್‌ .ಡಿ.ಕುಮಾರಸ್ವಾಮಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಬಳಿಕ, ಅವರು ಚನ್ನಪಟ್ಟಣ ಕ್ಷೇತ್ರವನ್ನು
ಉಳಿಸಿಕೊಂಡಿದ್ದರಿಂದ ಕ್ಷೇತ್ರಕ್ಕೆ ಈಗ ಉಪಚುನಾವಣೆ ಎದುರಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಜೆಡಿಎಸ್‌ ಭದ್ರಕೋಟೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ, ಕಾಂಗ್ರೆಸ್‌, ತನ್ನ ಐಡೆಂಟಿಟಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿವೆ. ಇನ್ನೊಂದೆಡೆ, ಕ್ಷೇತ್ರವ್ಯಾಪ್ತಿಯಲ್ಲಿ ಗುಪ್ತವಾಹಿನಿಯಂತೆ 
ಪ್ರವಹಿಸುತ್ತಿರುವ ಬಿಜೆಪಿ, ಮೈತ್ರಿ ಪಕ್ಷಗಳ ನಿದ್ದೆಗೆಡಿಸಿದೆ. ಪಕ್ಷದ ಮತಗಳಿಕೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ನಿರೀಕ್ಷೆಯನ್ನು ಬಿಜೆಪಿ ಇರಿಸಿಕೊಂಡಿದೆ.

ಮೂಲಸೌಕರ್ಯಗಳ ಕೊರತೆ ಬಗ್ಗೆ ಭುಗಿಲೆದ್ದಿದೆ ಆಕ್ರೋಶ: ಎರಡು ದಶಕಗಳಿಂದ ಎಚ್‌.ಡಿ.ದೇವೇಗೌಡರು,
ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಂಡೇ ಬರಿ¤ದ್ದೀವಿ. ಕುಮಾರಸ್ವಾಮಿ ಕ್ಷೇತ್ರಕ್ಕೆ ಬರದಿದ್ದರೂ ಅವರನ್ನು ಆರಿಸಿದ್ದೇವೆ. ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದಾಗಿ 2004ರಲ್ಲಿ ಅವರು ನೀಡಿದ್ದ ಭರವಸೆ ಈವರೆಗೂ ಈಡೇರಿಲ್ಲ. ಮೂಲಸೌಕರ್ಯದ ಸಮಸ್ಯೆಗಳಿಗೆ ಪರಿಹಾರ ಸಿಕ್ಕೇ ಇಲ್ಲ ಎಂಬ ಅಸಮಾಧಾನವನ್ನು ಮತದಾರರು ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಮೇನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ವೇಳೆ ಭುಗಿ ಲೇಳದ ಮತದಾರರ ಈ ಅಸಮಾಧಾನ, ಉಪಚುನಾವಣೆಯಲ್ಲಿ ಭುಗಿಲೆದ್ದಿದೆ.
ಅನಿತಾ ಕುಮಾರಸ್ವಾಮಿ ಪ್ರಚಾರಕ್ಕೆ ಹೋದೆಡೆ ಯಲ್ಲೆಲ್ಲ ಮತದಾರರು ನೇರವಾಗಿಯೇ ಅವರನ್ನು ಪ್ರಶ್ನಿಸುತ್ತಿದ್ದಾರೆ. ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮತದಾರರ ಪ್ರಶ್ನೆಗೆ ಅನಿತಾ ಅವರ ಮೌನವೇ ಉತ್ತರವಾಗಿದೆ ಎಂಬ ಟೀಕೆಗಳು ಕೇಳಿ ಬರುತ್ತಿವೆ.

ಶಮನವಾಗದ ಅಸಮಾಧಾನ: ಜೆಡಿಎಸ್‌-ಕಾಂಗ್ರೆಸ್‌ಪಕ್ಷಗಳ ರಾಜಕೀಯ ಮೈತ್ರಿ ಬಗ್ಗೆ ಎರಡೂ ಪಕ್ಷಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಮುಖಂಡರು ಪ್ರತ್ಯೇಕವಾಗಿ ಕಾರ್ಯಕರ್ತರ ಸಭೆಗಳನ್ನು ಆಯೋಜಸಿ, ಮನವೊಲಿಸುವ ಪ್ರಯತ್ನ ನಡೆಸಿದ್ದರು. ನಂತರ ಎರಡೂ ಪಕ್ಷಗಳ ವರಿಷ್ಠರು ಜಂಟಿ ಸಭೆಗಳನ್ನು ಆಯೋಜಿಸಿದ್ದರು. ಹಾರೋಹಳ್ಳಿ
ಹೋಬಳಿಯಲ್ಲಿ ಸೋಮವಾರ ನಡೆದ ಪ್ರಚಾರದ ವೇಳೆ ಮೇಲ್ಮಟ್ಟದಲ್ಲಿ ನೀವು ಹೊಂದಾಣಿಕೆ ಮಾಡಿಕೊಂಡಿದ್ದೀರಿ. ಹೀಗಾಗಿ, ವರಿಷ್ಠರೇ ಪ್ರಚಾರ ಮಾಡಿಕೊಳ್ಳಲಿ. ತಾವು ಬರೋಲ್ಲ ಎಂದು ಎರಡೂ ಪಕ್ಷಗಳ ಕಾರ್ಯಕರ್ತರು ಅನಿತಾ ಕುಮಾರಸ್ವಾಮಿ ಮತ್ತು ಡಿ.ಕೆ.ಸುರೇಶ್‌ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಕರಣ ಅಸಮಾಧಾನ ಇನ್ನೂ ಶಮನ ಆಗಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಎಂಎಲ್‌ಸಿ, ಸಿ.ಎಂ.ಲಿಂಗಪ್ಪ ಅವರ ಪುತ್ರ ಹಾಗೂ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಎಲ್‌.ಚಂದ್ರಶೇಖರ್‌ ಅವರು ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದಾರೆ. ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದರಿಂದ ಅನೇಕ ನಿಷ್ಠಾವಂತ ಕಾಂಗ್ರೆಸ್ಸಿಗರು ಬೇಸರಗೊಂಡಿದ್ದು, ವರಿಷ್ಠರಿಗೆ ಬುದಿಟಛಿ ಕಲಿಸುವ ಸಲುವಾಗಿ ಎಲ್‌.ಚಂದ್ರಶೇಖರ್‌ಗೆ ಮತ ಚಲಾಯಿಸುವುದಾಗಿ ತಮ್ಮ ಆಪೆಷ್ಟರ ಬಳಿ ಹೇಳಿಕೊಂಡಿದ್ದಾರೆ. ಈ ಮಧ್ಯೆ, ಅನಿತಾ ಕುಮಾರಸ್ವಾಮಿಗೆ ಶೇಕಡಾವಾರು ಮತಗಳಿಕೆಯಲ್ಲಿ ಕಡಿಮೆಯಾದರೆ
ಅದು ಜೆಡಿಎಸ್‌ಗೆ ಆಗುವ ಮುಖಭಂಗವಲ್ಲ, ಕಾಂಗ್ರೆಸ್‌ಗೆ ಆಗುವ ಅವಮಾನ. ಹೀಗಾಗಿ, ಮತದಾರರನ್ನು ಮತಗಟ್ಟೆಗೆ ಕರೆತರುವಲ್ಲಿ
ಕಾಂಗ್ರೆಸ್‌ ಕಾರ್ಯಕರ್ತರು ಹೆಚ್ಚಿನ ಪಾತ್ರ ವಹಿಸುವಂತೆ ಡಿ.ಕೆ.ಬ್ರದರ್ ಸ್ಪಷ್ಟ ಸೂಚನೆ ಕೊಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನು, ಕ್ಷೇತ್ರವ್ಯಾಪ್ತಿಯ ಕೈಲಾಂಚ ಮತ್ತು ಕಸಬಾ ಹೋಬಳಿಗಳಲ್ಲಿ ಜೆಡಿಎಸ್‌ ಪ್ರಭಾವ ಹೆಚ್ಚಿದ್ದರೆ, ಹಾರೋಹಳ್ಳಿ ಮತ್ತು ಮರಳವಾಡಿಯಲ್ಲಿ ಡಿ.ಕೆ.ಸಹೋದರರ ಪ್ರಭಾವ ಹೆಚ್ಚು. ಆದರೆ, ಮೇನಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ವೇಳೆ ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಗಳಲ್ಲಿ ಜಿಪಂ, ತಾಪಂ ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿದ್ದರೂ, ಎಚ್‌ .ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚು ಮತಗಳು ಲಭ್ಯವಾಗಿದ್ದವು. ಕಾರ್ಯಕರ್ತರು, ಮತದಾರರಲ್ಲಿನ ಅಸಮಾಧಾನದ ನಡುವೆಯೂ ಜೆಡಿಎಸ್‌, ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಒಕ್ಕಲಿಗ ಅಭ್ಯರ್ಥಿಗಳೇ ಗೆದ್ದು ಬರುತ್ತಿರುವ ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಸಹ ಪ್ರಭಾವಿ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದರಿಂದ ಮೈತ್ರಿ ಪಕ್ಷಗಳು ಎಚ್ಚರ ತಪ್ಪದೆ ತಂತ್ರಗಳನ್ನು ಹೆಣೆಯುತ್ತಿವೆ.

ಕ್ಷೇತ್ರ ವ್ಯಾಪ್ತಿ
ರಾಮನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಗೆ ರಾಮನಗರ ಜಿಲ್ಲಾ ಕೇಂದ್ರ, ರಾಮನಗರ ತಾಲೂಕಿನ ಕಸಬಾ ಮತ್ತು ಕೈಲಾಂಚ
ಹೋಬಳಿಗಳು, ಕನಕಪುರ ತಾಲೂಕಿನ ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಗಳು ಬರಲಿವೆ. 

 ಸೂರ್ಯಪ್ರಕಾಶ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.