ಮೈತ್ರಿ ಹೋರಾಟ ಲೋಕಸಭಾ ಚುನಾವಣೆಗೆ ವೇದಿಕೆ: ಸಿಎಂ
Team Udayavani, Nov 3, 2018, 6:00 AM IST
ಹಾಸನ: ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಚುನಾವಣೆಯನ್ನೇ ರದ್ದುಗೊಳಿಸಬೇಕೆಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವುದು, ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳುವುದು ಬಾಲಿಶತನದ ನಡವಳಿಕೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಿಡಿ ಕಾರಿದ್ದಾರೆ. ರಾಮನಗರ ಕ್ಷೇತ್ರದಲ್ಲಿ ನಾನು
ನಾಲ್ಕು ಬಾರಿ ಚುನಾವಣೆ ಎದುರಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಕ್ಷೇತ್ರದಲ್ಲಿ ಪ್ರಚಾರ ನಡೆಸದಿದ್ದರೂ ಅಲ್ಲಿನ ಮತದಾರರು ನನ್ನನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಅಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವೇ ಇಲ್ಲ ಎಂಬುದು ಬಿಜೆಪಿಯವರಿಗೂ ಗೊತ್ತಿತ್ತು. ಆದರೂ, ಕಾಂಗ್ರೆಸ್ನ ಮುಖಂಡನನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆಗೆ ಇಳಿಸಿದರು. ಗೆಲ್ಲಲು ಸಾಧ್ಯವಿಲ್ಲ ಎಂದು ಚುನಾವಣಾ ಕಣದಿಂದ ವಾಪಸ್ಸಾಗಿ ದ್ದಾರೆ. ಆ ಬೆಳವಣಿಗೆಗೂ, ಜೆಡಿಎಸ್ಗೂ ಸಂಬಂಧವಿಲ್ಲ ಎಂದು ಸ್ಪಷ್ಟಡಿಸಿದರು. ಮೂರು ಲೋಕಸಭೆ, ಎರಡು
ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ. ಈ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್ – ಜೆಡಿಎಸ್ ಮುಖಂಡರು ಜಂಟಿ ಪ್ರಚಾರ ನಡೆಸಿರುವ ಬೆಳವಣಿಗೆಯು ಮುಂಬರುವ ಲೋಕಸಭಾ ಚುನಾವಣೆಯ ಮೈತ್ರಿಗೆ ವೇದಿಕೆಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ