ಮಧ್ಯಾಹ್ನ ಬಿಸಿಯೂಟ ಮಾಹಿತಿ ನೀಡದಿದ್ರೆ ಅನುದಾನ ಕಟ್‌


Team Udayavani, Nov 9, 2018, 6:56 AM IST

51.jpg

ಚಿತ್ರದುರ್ಗ: ಮಧ್ಯಾಹ್ನ ಬಿಸಿಯೂಟಕ್ಕೆ ಹಾಜರಾದ ಮಕ್ಕಳ ಸಂಖ್ಯೆಯನ್ನು ಎಸ್‌ಎಂಎಸ್‌ ಮಾಡದಿರುವ ಮುಖ್ಯಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಸಿ ಮುಟ್ಟಿಸಿದೆ. ಆಯಾ ದಿನದ ಬಿಸಿಯೂಟದ ಅನುದಾನವನ್ನು ಭರಿಸುವಂತೆ ಕಟ್ಟುನಿಟ್ಟಿನ
ಸೂಚನೆ ನೀಡಿದೆ. ಬಿಸಿಯೂಟ ಮಾಹಿತಿಯನ್ನು ಕೆಲವು ಮುಖ್ಯಶಿಕ್ಷಕರು ಸಮರ್ಪಕವಾಗಿ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ರಾಜ್ಯದ ಎಲ್ಲ ಬಿಸಿಯೂಟ ಅಧಿ ಕಾರಿಗಳಿಗೆ ಮತ್ತು ಶಾಲಾ ಮುಖ್ಯಶಿಕ್ಷಕರಿಗೆ ನ. 2 ರಂದು ಎಚ್ಚರಿಕೆ ನೋಟಿಸ್‌ ಜಾರಿ ಮಾಡಿದ್ದಾರೆ.

ಮಕ್ಕಳ ಹಾಜರಾತಿಗೆ ತಕ್ಕಂತೆ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಮಧ್ಯಾಹ್ನದ ಬಿಸಿಯೂಟಕ್ಕೆ ಶೇ. ನೂರರಷ್ಟು ಅನುದಾನ ಪಡೆಯುತ್ತಿದ್ದರು. ಆದರೆ ಇಡೀ ರಾಜ್ಯದಲ್ಲಿ ಶೇ.40 ರಿಂದ 45ರಷ್ಟು ಶಾಲಾ ಮಕ್ಕಳ ಹಾಜರಾತಿಯನ್ನಷ್ಟೇ ಎಸ್‌ಎಂಎಸ್‌ ಮೂಲಕ
ಶಿಕ್ಷಣ ಇಲಾಖೆಗೆ ಕಳುಹಿಸಲಾಗುತ್ತಿತ್ತು. ಶೇ. ನೂರರಷ್ಟು ಪ್ರಗತಿ ಸಾಧಿಸುವಂತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮೇಲಾಧಿಕಾರಿಗಳು ಸೂಚನೆ ನೀಡಿ ದ್ದರು. ಆದರೂ ಮುಖ್ಯಶಿಕ್ಷಕರು ಕಿವಿಗೊಟ್ಟಿರಲಿಲ್ಲ. ಮಧ್ಯಾಹ್ನದ ಬಿಸಿಯೂಟ ನೀಡುವ ಬಗ್ಗೆ ಎಸ್‌ ಎಂಎಸ್‌ ಮೂಲಕವೇ ಮೇಲ್ವಿಚಾರಣೆ ಮಾಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಾಜರಾತಿ ತಿಳಿದುಕೊಳ್ಳಲಾಗುತ್ತದೆ. ಇದರ ಆಧಾರದ ಮೇರೆಗೆ ಬಿಸಿಯೂಟ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 18 ತಿಂಗಳಿನಿಂದ ಎಸ್‌ ಎಂಎಸ್‌ ಪದಟಛಿತಿ ಅಳವಡಿಕೆ ಮಾಡಲಾಗಿತ್ತು. ಪ್ರತಿ ದಿನ ಶಾಲೆಗೆ ಹಾಜರಾದ ಮಕ್ಕಳ ಮಾಹಿತಿಯನ್ನು ಸ್ಪಷ್ಟ ಹಾಗೂ ನಿಖರವಾಗಿ ಎಸ್‌ಎಂಎಸ್‌ ಕಳುಹಿಸಬೇಕಿದೆ. ಒಂದೊಮ್ಮೆ ಮುಖ್ಯಶಿಕ್ಷಕರು, ನೋಡಲ್‌ ಶಿಕ್ಷಕ ಎಸ್‌ಎಂಎಸ್‌ ಕಳುಹಿಸದಿದ್ದರೆ ಸಿಆರ್‌ಪಿ ಮತ್ತು ಶಿಕ್ಷಕರಿಗೆ ಎಸ್‌ಎಂಎಸ್‌ ಕಳುಹಿಸಿಲ್ಲ ಎನ್ನುವ ಸಂದೇಶ ಸ್ವಯಂಚಾಲಿತವಾಗಿ ಬರುತ್ತಿತ್ತು. ಮಕ್ಕಳ ಹಾಜರಾತಿ ಆಧರಿಸಿ ಬಿಸಿಯೂಟಕ್ಕೆ ಅನುದಾನ ಬಿಡುಗಡೆಯಾಗುತ್ತಿತ್ತು.

ಏನಿದು ಎಸ್‌ಎಂಎಸ್‌ ಪದ್ಧತಿ?: ಮಧ್ಯಾಹ್ನ ಬಿಸಿಯೂಟಕ್ಕೆ ಹಾಜರಾಗುವ ಮಕ್ಕಳ ಹಾಜರಾತಿ ವಿವರವನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ನೋಡಲ್‌ ಸಹಾಯಕ ಶಿಕ್ಷಕರು ಕಡ್ಡಾಯವಾಗಿ ಪ್ರತಿ ದಿನ ಸಂಜೆ 4 ಗಂಟೆಯೊಳಗೆ ಉಚಿತ ಟೋಲ್‌ಫ್ರಿ ಸಂಖ್ಯೆ 15544ಕ್ಕೆ ಎಸ್‌ಎಂಎಸ್‌ ಮೂಲಕ ಕಳುಹಿಸಬೇಕು. ಈ ಹಂತದಲ್ಲಿ ತಲೆದೋರುವ ಸಮಸ್ಯೆಗಳಿಗೆ ಟೋಲ್‌ಫ್ರಿ ಸಂಖ್ಯೆ 1800-425-20007ಕ್ಕೆ ಉಚಿತ ಕರೆ ಮಾಡಿ ಪರಿಹಾರ ಕಂಡುಕೊಳ್ಳುವ
ವ್ಯವಸ್ಥೆ ಜಾರಿಯಲ್ಲಿದೆ.

ಮುಖ್ಯಶಿಕ್ಷಕರು ಮತ್ತು ನೋಡಲ್‌ ಶಿಕ್ಷಕರ ಹೆಸರು ಮತ್ತು ಮೊಬೈಲ್‌ ಸಂಖ್ಯೆ ನೋಂದಣಿಯಾಗಿರುತ್ತದೆ. ಈ ಇಬ್ಬರು ಶಿಕ್ಷಕರು ರಜೆ ಹೋಗಿದ್ದರೆ ಅವರನ್ನು ಹೊರತುಪಡಿಸಿ ಬೇರೆ ಯಾವ ಶಿಕ್ಷಕರೂ ಎಸ್‌ಎಂಎಸ್‌ ಕಳುಹಿಸಲು ಬರುವುದಿಲ್ಲ. ದಿನಕ್ಕೆ ಒಂದು ಸಲ ಮಾತ್ರ ಎಸ್‌ಎಂಎಸ್‌ ಕಳುಹಿಸಬೇಕು. ಆಯಾ ದಿನದ ಮಾಹಿತಿಯನ್ನು ಮಾರ್ಪಾಟು ಮಾಡಲು ಸಾಧ್ಯವಿಲ್ಲ. ಮಧ್ಯಾಹ್ನ ಬಿಸಿಯೂಟ
ಬಡಿಸುವ ಸಂದರ್ಭದಲ್ಲಿ ಹಾಜರಿದ್ದ ತರಗತಿವಾರು ಮಕ್ಕಳು ಮತ್ತು ಶಿಕ್ಷಕರ ಸಂಖ್ಯೆಯನ್ನು ಎಎಂಎಸ್‌ (ಆಟೋಮೆಟೆಡ್‌ ಮಾನಿಟರಿಂಗ್‌ ಸಿಸ್ಟಂ) ಮೂಲಕ ಎಸ್‌ಎಂಎಸ್‌ ಕಳುಹಿಸಬೇಕು. ಬೇರೊಂದು ಶಾಲೆಗಳಿಗೆ ಮಕ್ಕಳನ್ನು ಟ್ಯಾಗ್‌ ಮಾಡಿದ್ದರೂ ಕೇಂದ್ರ
ಶಾಲೆಯ ಮುಖ್ಯ ಶಿಕ್ಷಕರು ಮಕ್ಕಳ ಬಿಸಿಯೂಟ ಹಾಜರಾತಿ ಕಳುಹಿಸುವುದು ಕಡ್ಡಾಯ.

ಮುಖ್ಯಶಿಕ್ಷಕರು ಸಮರ್ಪಕವಾಗಿ ಎಸ್‌ಎಂಎಸ್‌ ಕಳುಹಿಸದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯ ಶಿಕ್ಷಕರಿಗೆ ಚುರುಕು ಮುಟ್ಟಿಸಲು ಮುಂದಾಗಿದೆ. ಇದು ಎಷ್ಟರಮಟ್ಟಿಗೆ ಫಲಪ್ರದವಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ. 

58 ಲಕ್ಷ ಫಲಾನುಭವಿಗಳು 
ರಾಜ್ಯದ ಒಟ್ಟು 54,839 ಶಾಲೆಗಳಿಂದ 58,20,526 ಮಕ್ಕಳು ಬಿಸಿಯೂಟ ಮಾಡುತ್ತಿದ್ದಾರೆ. ಇದರಲ್ಲಿ 21,209 ಸರ್ಕಾರಿ
ಪ್ರಾಥಮಿಕ ಶಾಲೆಗಳು, 22270 ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳು, 4592 ಸರ್ಕಾರಿ ಪ್ರೌಢಶಾಲೆಗಳು, 27 ಬಾಲ ಕಾರ್ಮಿಕ
ಶಾಲೆಗಳಾಗಿವೆ. ಅನುದಾನಕ್ಕೊಳಪಟ್ಟ 225 ಪ್ರಾಥಮಿಕ, 2666 ಹಿರಿಯ ಪ್ರಾಥಮಿಕ, 3813 ಪ್ರೌಢಶಾಲೆಗಳು, 37 ಮದರಸಾಗಳಿವೆ.

ಆಯಾ ದಿನದ ಬಿಸಿಯೂಟದ ಹಾಜರಾತಿ ಎಸ್‌ಎಂಎಸ್‌ ಕಳುಹಿಸದಿದ್ದಲ್ಲಿ ಮುಖ್ಯ ಶಿಕ್ಷಕರೇ ಆ ದಿನದ ಅನುದಾನ ಭರಿಸಬೇಕೆಂದು
ಸರ್ಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಸರಾಸರಿ 40 ರಿಂದ 45ರಷ್ಟು ಫಲಾನುಭವಿ ವಿದ್ಯಾರ್ಥಿಗಳ ಹಾಜರಾತಿ ಕಳುಹಿಸಲಾಗುತ್ತಿದೆ.
● ದ್ವಾರಕೇಶ್‌, ಜಿಲ್ಲಾ ಬಿಸಿಯೂಟ ಅಧಿಕಾರಿ

● ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.