CONNECT WITH US  

ಟಿಪ್ಪು ಜಯಂತಿ: ಸಿಎಂ ಭಾಗಿಯಾಗುತ್ತಿಲ್ಲ; ಹೊಸ ಚರ್ಚೆ ಶುರು!

ಬೆಂಗಳೂರು: ನಾಳೆ ಶನಿವಾರ ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆಯಾಗಲಿರುವ ಟಿಪ್ಪು ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಭಾಗಿಯಾಗುತ್ತಿಲ್ಲ. ಅನಾರೋಗ್ಯದ ಕಾರಣ ವಿಶ್ರಾಂತಿ ಪಡೆಯಯಬೇಕಾಗಿರುವ ಕಾರಣ ಸಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ.

ಸಿಎಂ ಕುಮಾರಸ್ವಾಮಿ ಅವರ ಈ ನಿರ್ಧಾರ ಹೊಸ ಚರ್ಚೆ ಹುಟ್ಟು ಹಾಕಿದ್ದು, ಗೈರಾಗುತ್ತಿರುವ ಕುರಿತು ಸರ್ಕಾರ ಮತ್ತು ಕಾಂಗ್ರೆಸ್‌ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. 

ವೈದ್ಯರ ಸಲಹೆಯಂತೆ ಸಿಎಂ ಕುಮಾರಸ್ವಾಮಿ ಅವರು ನವೆಂಬರ್‌ 11 ರವರೆಗೆ ವಿಶ್ರಾಂತಿ ಪಡೆಯಲಿದ್ದಾರೆ. ಈ ದಿನಗಳಲ್ಲಿ ಕುಟುಂಬದವರೊಂದಿಕೆ ಕಾಲ ಕಳೆಯಲಿದ್ದು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬೇರೆ ಬೇರೆ ಕಾರಣಗಳಿಂದ ಅವರಿಗೆ ಕಾರ್ಯಕ್ರಮಕ್ಕೆ ಬರಲು ಆಗುತ್ತಿಲ್ಲ. ಅವರ ಆದೇಶವಿದ್ದ ಕಾರಣಕ್ಕೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಿಸಿಲ್ಲ. ಇದಕ್ಕೆ ಕಥೆ ಕಟ್ಟಿ  ದೊಡ್ಡ ವಿಷಯ ಮಾಡುವುದು ಬೇಡ ಎಂದರು. 

ಇನ್ನೊಂದೆಡೆ ಜೆಡಿಎಸ್‌ ನಾಯಕ, ಸಚಿವ ಬಂಡೆಪ್ಪ ಕಾಶಂಪೂರ್‌ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದು , ನಾವು ಟಿಪ್ಪು ಜಯಂತಿ ಆಚರಿಸುತ್ತೇವೆ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ಸಿಎಂ ಎಚ್‌ಡಿಕೆ ಅವರ ಈ ನಡೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಎಲ್ಲಾ ಸಿದ್ಧತೆ ನಡೆಸಿದೆ. ಗುರುವಾರ ರಾಜ್ಯಾಧ್ಯಂತ ಬೀದಿಗಳಿದು ಪ್ರತಿಭಟನೆ ನಡೆಸಿದೆ. ಬಿಜೆಪಿ ನಾಯಕರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದು, ಟಿಪ್ಪು ಮತ್ತು ಸರಕಾರದ ನಿರ್ಧಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. 

Trending videos

Back to Top