ಅಸಾಂಕ್ರಾಮಿಕ ರೋಗ ತಡೆಗೆ ವಿನೂತನ ಯೋಜನೆ

Team Udayavani, Nov 13, 2018, 6:20 AM IST

heatha.jpg

ಬೆಂಗಳೂರು: ಬದಲಾದ ಜೀವನ ಶೈಲಿಯಿಂದ ಗ್ರಾಮೀಣ ಭಾಗದಲ್ಲೂ  ರಕ್ತದೊತ್ತಡ, ಸಕ್ಕರೆ ಖಾಯಿಲೆ, ಕ್ಯಾನ್ಸರ್‌ ಇನ್ನಿತರ ಕಾಯಿಲೆಗಳು ಹೆಚ್ಚುತ್ತಿವೆ. 

ಈ ಹಿನ್ನೆಲೆಯಲ್ಲಿ ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡಿ, ಆ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆ ನೀಡುವ ವಿನೂತನ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.

ಸಾಮಾನ್ಯವಾಗಿ ಜ್ವರ, ಕೆಮ್ಮು, ಡೇಂ , ಚಿಕೂನ್‌ ಗುನ್ಯಾ ಸೇರಿದಂತೆ ಹಲವು  ಕಾಯಿಲೆಗಳು ಸುಲಭವಾಗಿ ಅನುಭವಕ್ಕೆ ಬರುತ್ತವೆ. ಆದರೆ, ಅಸಾಂಕ್ರಾಮಿಕ ರೋಗಗಳು ಅನುಭವಕ್ಕೆ ಬರುವ ವೇಳೆಗೆ ಚಿಕಿತ್ಸೆ ಪಡೆದರೂ ಗುಣಮುಖವಾಗದಂತಹ ಪರಿಸ್ಥಿತಿ ತಲುಪಿರುತ್ತವೆ. ಈ ಹಿನ್ನೆಲೆಯಲ್ಲಿ ಗ್ರಾಮಾಂತರ ಭಾಗದ ಜನರ ಆರೋಗ್ಯ ತಪಾಸಣೆ ನಡೆಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಚಿಕಿತ್ಸೆ ಕೊಡಿಸುವುದು ಯೋಜನೆ ಉದ್ದೇಶ.

ನಗರ ಪ್ರದೇಶಗಳಲ್ಲಿ ಜನರು ನಿಯಮಿತವಾಗಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಆದರೆ, ಗ್ರಾಮೀಣ ಭಾಗದಲ್ಲಿ ಜನರು ಹಣ, ಮಾಹಿತಿ ಕೊರತೆಯಿಂದಾಗಿ ವರ್ಷಕ್ಕೊಮ್ಮೆಯೂ ಆಸ್ಪತ್ರೆಗಳ ಕಡೆಗೆ ಮುಖ ಮಾಡದಿರುವುದು ಅಧ್ಯಯನಗಳಿಂದ ತಿಳಿದುಬಂದಿದೆ. 

ಹೀಗಾಗಿ ಮೊದಲ ಹಂತದಲ್ಲಿ 6 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಿರುವ ಆರೋಗ್ಯ ಇಲಾಖೆ, ಮುಂದೆ ರಾಜ್ಯದ ಪ್ರತೀ  ಹಳ್ಳಿಗೂ ತೆರಳಿ ಆರೋಗ್ಯ ತಪಾಸಣೆ ನಡೆಸುವ ಯೋಜನೆ ಹೊಂದಿದೆ.

ಈಗಾಗಲೇ ಚಿಕ್ಕಮಗಳೂರು, ಉಡುಪಿ, ಮೈಸೂರು, ರಾಯಚೂರು, ಗದಗ ಹಾಗೂ ಹಾವೇರಿ ಜಿಲ್ಲೆಗಳ ಆಯ್ದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಜನಸಂಖ್ಯಾಧಾರಿತ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಅದರಂತೆ ಏಪ್ರಿಲ್‌ನಿಂದೀಚೆಗೆ 50 ಸಾವಿರಕ್ಕೂ ಹೆಚ್ಚು ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಆ ಪೈಕಿ 892 ಜನರು ಮಧುಮೇಹ,  953 ಮಂದಿ ರಕ್ತದೊತ್ತಡ, 17 ಮಂದಿ ಕ್ಯಾನ್ಸರ್‌ಗೆ ಒಳಗಾಗಿರುವುದು ಕಂಡುಬಂದಿದೆ.

30 ವರ್ಷ ಮೇಲ್ಪಟ್ಟವರಿಗೆಲ್ಲ ತಪಾಸಣೆ:  ಯೋಜನೆಯಲ್ಲಿ ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರಗಳ ಶೂಶ್ರೂಷಕಿಯರು, ಅರೇ ವೈದ್ಯಕೀಯ ಸಿಬ್ಬಂದಿಗೆ ಅಸಾಂಕ್ರಾಮಿಕ ರೋಗಗಳ ಪತ್ತೆ ಹಚ್ಚುವ ಕುರಿತು ತರಬೇತಿ ನೀಡಲಾಗಿದೆ. ಅದರಂತೆ ಅವರೆಲ್ಲ ತಮ್ಮ ವ್ಯಾಪ್ತಿಗೆ ಬರುವ ಪ್ರತಿ ಗ್ರಾಮಕ್ಕೆ ತೆರಳಿ 30 ವರ್ಷ ಮೇಲ್ಪಟ್ಟವರ ಮಾಹಿತಿ ಕಲೆ ಹಾಕಿ, ನಂತರ ಅವರನ್ನು  ತಪಾಸಣೆಗೆ ಒಳಪಡಿಸಲಿದ್ದಾರೆ. ಈ ವೇಳೆ ರೋಗದ ಗುಣಾತ್ಮಕ ಲಕ್ಷಣಗಳು ಕಂಡುಬಂದರೆ ಹೆಚ್ಚಿನ ಪರೀಕ್ಷೆಗೆ ಸಮೀಪದ ಆಸ್ಪತ್ರೆಗಳಿಗೆ  ಕಳುಹಿಸುತ್ತಾರೆ.

ರೋಗಿ ನಿರಾಕರಿಸಿದರೂ, ಚಿಕಿತ್ಸೆ ಖಚಿತ: ರೋಗ ಲಕ್ಷಣಗಳು ಕಂಡಬಂದ ಕೂಡಲೇ ಆರೋಗ್ಯ ಕೇಂದ್ರದ ಸಿಬ್ಬಂದಿ  ಸಂಬಂಧಿಸಿದ ವ್ಯಕ್ತಿಯ ಸಂಪೂರ್ಣ ವಿವರವನ್ನೊಳಗೊಂಡ ವೈದ್ಯಕೀಯ ಕಡತ ಸಿದ್ಧಪಡಿಸುತ್ತಾರೆ. ಆನಂತರ ನಿರಂತರವಾಗಿ ಆ ವ್ಯಕ್ತಿಯನ್ನು ಸಂಪರ್ಕಿಸಿ ಆಗುತ್ತಿರುವ ತೊಂದರೆ,  ಚಿಕಿತ್ಸೆ ಪಡೆಯುತ್ತಿರುವ ಹಾಗೂ ಸೂಚಿಸಿದ ಔಷಧಿಗಳನ್ನು ಕಾಲಕಾಲಕ್ಕೆ ಪಡೆಯುತ್ತಿರುವ ಬಗ್ಗೆ ಪರಿವೀಕ್ಷಣೆ ನಡೆಸುತ್ತಾರೆ. ಒಂದೊಮ್ಮೆ ರೋಗಿಯು ಅಸಡ್ಡೆ ಮಾಡಿದರೆ ಸ್ವಯಂ ಜವಾಬ್ದಾರಿಯಿಂದ ಚಿಕಿತ್ಸೆ  ನೀಡಲು  ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಈಗಾಗಲೇ  ಆರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಜನಸಂಖ್ಯೆ ಆಧರಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಲಾಗುವುದು.
– ಡಾ.ಸೆಲ್ವರಾಜ್‌, ಉಪ ನಿರ್ದೇಶಕ, ಅಸಾಂಕ್ರಾಮಿಕ ರೋಗಗಳ ಘಟಕ, ಆರೋಗ್ಯ ಇಲಾಖೆ

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.