ಸೈಬರ್‌ ಕ್ರೈಂ ತಡೆಗೆ ತರಬೇತಿ ಶಾಲೆ ಆರಂಭ: ಪರಮೇಶ್ವರ್‌

Team Udayavani, Nov 18, 2018, 6:35 AM IST

parameshwara-700.jpg

ಬೆಳಗಾವಿ: ರಾಜ್ಯದಲ್ಲಿ ಸೈಬರ್‌ ಕ್ರೈಂ ಮೂಲಕ ನಡೆಯುತ್ತಿರುವ ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಲು ಬೆಂಗಳೂರಿನಲ್ಲಿ 22 ಕೋಟಿ ರೂ. ವೆಚ್ಚದಲ್ಲಿ ಸೈಬರ್‌ ಕ್ರೈಂ ತರಬೇತಿ ಶಾಲೆ ಆರಂಭಿಸಲಾಗುತ್ತಿದ್ದು, ಎಲ್ಲ ಪೊಲೀಸ್‌ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

ಇಲ್ಲಿಯ ಕಂಗ್ರಾಳಿ ಕೆ.ಎಚ್‌. ಗ್ರಾಮದ ರಾಜ್ಯ ಮೀಸಲು ಪೊಲೀಸ್‌ ಪಡೆಯ 362 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ
ಸಂಚಲನದಲ್ಲಿ ಶನಿವಾರ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಇನ್ಫೋಸಿಸ್‌ ಸಹಾಯದಿಂದ ಈ ತರಬೇತಿ ಶಾಲೆ ಆರಂಭಿಸಿ ಸೈಬರ್‌ ಕ್ರೈಂ ತಡೆಗಟ್ಟಲು ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ 1.06 ಲಕ್ಷ ಸಿಬ್ಬಂದಿ ಪೊಲೀಸ್‌ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು,ನಾಲ್ಕು ಸಾವಿರ ಸಿಬ್ಬಂದಿಯ ನೇಮಕ ಕಾರ್ಯ ನಡೆಯಲಿದೆ. ಇನ್ನೈದು ವರ್ಷಗಳಲ್ಲಿ 20 ಸಾವಿರ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆಯಲಿದೆ.

ಪೊಲೀಸ್‌ ಸಿಬ್ಬಂದಿಗೆ ವಸತಿ ಸೌಕರ್ಯ ಕಲ್ಪಿಸುವ ಕಾರ್ಯ ನಡೆದಿದ್ದು, 11 ಸಾವಿರ ಮನೆಗಳು ನಿರ್ಮಾಣ ಹಂತದಲ್ಲಿವೆ. ಪೊಲೀಸ್‌-ಗೃಹ ಎಂಬ ಯೋಜನೆ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸರು ದೇಶದಲ್ಲಿಯೇ ಪ್ರಖ್ಯಾತಿ ಪಡೆದಿದ್ದಾರೆ. ಎಂಥ ಕಷ್ಟ ಬಂದರೂ ಅದನ್ನು ಎದುರಿಸಲು ಸನ್ನದಟಛಿರಾಗಿದ್ದಾರೆ.

ಸಮಾಜದ ಹಿತ ಕಾಪಾಡಲು, ರಾಜ್ಯದ ನೆಲ-ಜಲ, ಜನರ ರಕ್ಷಣೆಗೆ ಸದಾ ಮುಂದಿದ್ದಾರೆ. ಕೆಎಸ್‌ಆರ್‌ಪಿ ತರಬೇತಿ ಪೂರ್ಣಗೊಳಿಸಿರುವ ಪ್ರಶಿಕ್ಷಣಾರ್ಥಿಗಳು ಶಾರೀರಿಕ, ಮಾನಸಿಕ ಹಾಗೂ ಆಧುನಿಕ ವಿದ್ಯಮಾನಗಳ ಬಗ್ಗೆ ತರಬೇತಿ ಪಡೆದುಕೊಂಡಿದ್ದು, ರಾಜ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಗೊಂಡಿದ್ದಾರೆ ಎಂದು ಹೇಳಿದರು.

ಡಾ| ಬಾಬಾಸಾಹೇಬ ಅಂಬೇಡ್ಕರರ ಆಶಯದಂತೆ ಜಾತೀಯತೆ, ಧರ್ಮ ಸಂಘರ್ಷ, ಅಪರಾಧ ಪ್ರಕರಣಗಳಿಗೆ ಮಟ್ಟ ಹಾಕಬೇಕಾಗಿದೆ. ಈ ಎಲ್ಲ ಪದರುಗಳನ್ನು ತೊಡೆದು ಹಾಕಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಎಲ್ಲರಿಗೂ ಸಮಾನತೆ ಸಿಗಬೇಕು ಎಂಬ ಸಂವಿಧಾನದ ಆಶಯ ಈಡೇರಿಲ್ಲ ಎಂಬುದು ಬೇಸರ ತಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಶಿಕ್ಷಣಾರ್ಥಿಗಳಲ್ಲಿ ಪದವೀಧರರೇ ಹೆಚ್ಚು: 362 ಜನ ಪ್ರಶಿಕ್ಷಣಾರ್ಥಿಗಳ ಪೈಕಿ 180ಕ್ಕೂ ಹೆಚ್ಚು ಜನ ಪದವೀಧರರಾಗಿದ್ದು, 15 ಜನ ಸ್ನಾತಕೋತ್ತರ ಪದವಿ, 13 ಜನ ಪದವಿ ಪೂರ್ವ, 20 ಡಿಪ್ಲೊಮಾ ಹಾಗೂ 13 ಜನ ಎಸ್ಸೆಸ್ಸೆಲ್ಸಿ ಶಿಕ್ಷಣ ಪಡೆದಿದ್ದಾರೆ. ಕೆಎಸ್‌ಆರ್‌ಪಿ
ಹುದ್ದೆಗೆ ಎಸ್ಸೆಸ್ಸೆಲ್ಸಿ ಅರ್ಹತೆ ಇದ್ದರೂ ಪದವಿ ಮಾಡಿದವರು ಬರುತ್ತಿದ್ದಾರೆ ಎಂದರೆ ಇಲಾಖೆಯ ಮಟ್ಟ ಹೆಚ್ಚಾಗುತ್ತ ಹೋಗುತ್ತಿದೆ. ರಾಜ್ಯ ಪೊಲೀಸ್‌ ಇಲಾಖೆಗೆ ಅನೇಕ ಸವಾಲುಗಳು ಬರುತ್ತಿದ್ದು, ಅದನ್ನು ಎದುರಿಸಲು ಸಿದ್ಧಗೊಳ್ಳಬೇಕು ಎಂದು ಡಾ| ಜಿ. ಪರಮೇಶ್ವರ ಹೇಳಿದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.