ಬೆಳಗಾವಿ ರಾಜಕಾರಣಕ್ಕೆ ಡಿಕೆಶಿ ರೀ ಎಂಟ್ರಿ


Team Udayavani, Nov 24, 2018, 6:30 AM IST

ban24.jpg

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ತಲೆನೋವಾಗಿರುವ ಕಬ್ಬು ಬೆಳೆಗಾರರ ಬಾಕಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಆಡಳಿತದಲ್ಲಿ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್‌ “ರಂಗಪ್ರವೇಶ’ ಮಾಡಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರಿಂದ ವಸೂಲಾಗಬೇಕಿರುವ ಬಾಕಿ ಪಾವತಿಗಾಗಿ ಹತ್ತು ದಿನಗಳಿಂದ ಧರಣಿ ನಡೆಸುತ್ತಿದ್ದ ರೈತರ ಮನವೊಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರ ಕೈಲಿ ಆಗದ ಕೆಲಸ ತಾನು ಮಾಡಿ ತೋರಿಸಿದ್ದೇನೆ ಎಂಬ ಸಂದೇಶ ರವಾನಿಸಿದ್ದಾರೆ.

ಈ ಮೂಲಕ “ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್‌ಗೆ ಏನು ಕೆಲಸ’ ಎಂದು ಪ್ರಶ್ನಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ರಾಜಕೀಯವಾಗಿಯೂ ಟಾಂಗ್‌ ನೀಡಿದ್ದಾರೆ.

ರೈತರ ಸಭೆಯಲ್ಲೇ ನಾಲ್ಕು ವರ್ಷಗಳಿಂದ ರಮೇಶ್‌ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ರೈತರಿಗೆ ಬಾಕಿ ಕೊಟ್ಟಿಲ್ಲ ಎಂಬ ಅಂಶವೂ ಪ್ರಸ್ತಾಪವಾಗುವಂತೆ ನೋಡಿಕೊಂಡು, ರಮೇಶ್‌ ಜಾರಕಿಹೊಳಿ ತುಂಬಾ ಪ್ರಮಾಣಿಕರು. ರೈತರ ಬಾಕಿ ಉಳಿಸಿಕೊಂಡಿದ್ದರೆ ಖಂಡಿತವಾಗಿಯೂ ಕೊಡುತ್ತಾರೆ ಎಂದು ಕಾಳೆದಿದ್ದಾರೆ.

ಇದರಿಂದಾಗಿ ಬೆಳಗಾವಿ ಜಿಲ್ಲಾ ರಾಜಕೀಯ ಸಂಘರ್ಷ ಮತ್ತೆ ಭುಗಿಳೇಳುವ ಸಾಧ್ಯತೆಯೂ ಇದೆ. ಡಿ.ಕೆ.ಶಿವಕುಮಾರ್‌ ತಮ್ಮ ಸಾಮ್ರಾಜ್ಯಕ್ಕೆ ಲಗ್ಗೆ ಇಡುವುದು ಇಷ್ಟಪಡದ ಜಾರಕಿಹೊಳಿ ಸಹೋದರರು ಸರ್ಕಾರದ ವಿರುದ್ಧ ತಿರುಗಿ ಬೀಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಮುಂಬೈ ಕರ್ನಾಟಕ ಭಾಗದಲ್ಲಿ ಶುಗರ್‌ ಲಾಬಿ ಹಿಡಿತದಲ್ಲಿಟ್ಟುಕೊಂಡಿರುವ ಜಾರಕಿಹೊಳಿ ಸಹೋದರರಿಗೆ ರಾಜಕೀಯವಾಗಿಯೇ ತಿರುಗೇಟು ನೀಡುವ ಸಲುವಾಗಿಯೇ ಡಿ.ಕೆ.ಶಿವಕುಮಾರ್‌, ನೀರು ಮತ್ತು ವಿದ್ಯುತ್‌ ಕುರಿತ ಅಧ್ಯಯನ ನೆಪದಲ್ಲಿ ಬೆಳಗಾವಿಗೆ ಭೇಟಿ ನೀಡಿ ಧರಣಿ ನಿರತರ ರೈತರ ಜತೆ ಮಾತನಾಡಿ ಎಳನೀರು ಕೊಟ್ಟು ಧರಣಿ ಅಂತ್ಯ ಮಾಡುವಂತೆ ನೋಡಿಕೊಂಡಿದ್ದಾರೆ.

ಬಳ್ಳಾರಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಕೆ ಸಮಾರಂಭದಲ್ಲಿ ಪಾಲ್ಗೊಂಡು ಅಲ್ಲಿಂದ ನೇರವಾಗಿ ಬೆಳಗಾವಿಗೆ ಹೊರಟು ರೈತರ ಧರಣಿ ಸ್ಥಳಕ್ಕೆ ತಲುಪಿಸಿ ಮಾತುಕತೆ ನಡೆಸಿರುವುದು ರಾಜಕೀಯ ವಲಯಗಳಲ್ಲಿ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಜಾರಕಿಹೊಳಿ ಸಹೋದರರ ಪ್ರಾಬಲ್ಯ ಹಣಿಯುವ ಸಲುವಾಗಿಯೇ ಶಿವಕುಮಾರ್‌ ಬೆಳಗಾವಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಡಿ.ಕೆ,ಶಿವಕುಮಾರ್‌ ವಿರುದ್ಧ ರಮೇಶ್‌ ಜಾರಕಿಹೊಳಿ ದೂರು ನೀಡಿ ಅವರೇಕೆ ನಮ್ಮ ಜಿಲ್ಲೆಯಲ್ಲಿ ಮೂಗು ತೂರಿಸುತ್ತಾರೆ ಎಂದು ಪ್ರಶ್ನಿಸಿದ್ದವರಿಗೆ ನಾನೂ ಸರ್ಕಾರ, ನಾನ್ಯಾಕೆ ಹೋಗಬಾರದು ಎಂದು  ಹೇಳಿ ಬೆಳಗಾವಿಗೆ ಹೋದ ಡಿ.ಕೆ.ಶಿವಕುಮಾರ್‌ ತಮ್ಮ ತಾಕತ್ತು ಪ್ರದರ್ಶಿಸಿ ತಾನು ಟ್ರಬಲ್‌ ಶೂಟರ್‌ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.

ಮುಖ್ಯಮಂತ್ರಿಯವರು ವಿಧಾನಸೌಧಕ್ಕೆ ಮಾತುಕತೆಗೆ ಬರುವಂತೆ ಕೋರಿದರೂ ರೈತರು ಬಾರದೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಮುಂದುವರಿಸಿದ್ದರಿಂದ  ಅಧಿವೇಶನ ಸಂದರ್ಭದಲ್ಲಿ ರೈತರು ಧರಣಿ ಕುಳಿತರೆ ಕಷ್ಟವಾಗಬಹುದು ಎಂಬ ಕಾರಣಕ್ಕೆ ಡಿ.ಕೆ.ಶಿವಕುಮಾರ್‌ ಬಳ್ಳಾರಿಯಿಂದ ನೇರವಾಗಿ ಬೆಳಗಾವಿಗೆ ಹೋದರು ಎನ್ನಲಾಗಿದೆ.

ಒಟ್ಟಾರೆ, ರಾಜಕೀಯವಾಗಿ ಡಿ.ಕೆ.ಶಿವಕುಮಾರ್‌ ಬಳ್ಳಾರಿ ಉಪ ಚುನಾವಣೆ ನಂತರ ಬಲಿಷ್ಠವಾಗುತ್ತಿದ್ದು ಹೈಕಮಾಂಡ್‌ ಸಹ ಅವರಿಗೆ ಪ್ರಾಮುಖ್ಯತೆ ನೀಡುತ್ತಿದೆ. ಹೀಗಾಗಿಯೇ ತೆಲಂಗಾಣ ರಾಜ್ಯದ ಚುನಾವಣಾ ಉಸ್ತುವಾರಿ ವಹಿಸಿದೆ ಎಂದು ಹೇಳಲಾಗಿದೆ.

ಬೆಳಗಾವಿಯಲ್ಲಿ ಅತ್ತ ಡಿ.ಕೆ.ಶಿವಕುಮಾರ್‌ ರೈತರನ್ನು ಭೇಟಿ ಮಾಡಿ ಧರಣಿ ವಾಪಸ್‌ ತೆಗೆಸುತ್ತಿದ್ದಂತೆ ತಮ್ಮ ಜಿಲ್ಲೆಗೆ ಎಂಟ್ರಿ ಕೊಟ್ಟು ತಮ್ಮ ಕೈಲಾಗದ ಕೆಲಸ ತಾನು ಮಾಡಿದಂತೆ ಬಿಂಬಿಸಿಕೊಂಡಿದ್ದರಿಂದ ಆಕ್ರೋಶಗೊಂಡಿರುವ ಜಾರಕಿಹೊಳಿ ಸಹೋದರರು ಮತ್ತೆ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ತಮ್ಮ ಜತೆ ಸಂಪರ್ಕದಲ್ಲಿರುವ ಹದಿನೈದು ಶಾಸಕರ ಜತೆ ಗುಪ್ತ ಸಮಾಲೋಚನೆ ನಡೆಸಿದ್ದಾರೆ. ಬೆಳಗಾವಿ ವಿಧಾನಮಂಡಲ ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಆಗದಿದ್ದರೆ ಅಧಿವೇಶನಕ್ಕೆ ಗೈರು  ಆಗಲು ತೀರ್ಮಾನಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.