ಹೆಚ್ಚುವರಿ ಜಮೀನು ನೀಡಲು ನಕಾರ
Team Udayavani, Dec 4, 2018, 6:00 AM IST
ಬೆಂಗಳೂರು: ಹಾಸನ ವಿಮಾನ ನಿಲ್ದಾಣ ಯೋಜನೆಗೆ ಹೆಚ್ಚುವರಿ ಜಮೀನು ನೀಡಲು ರಾಜ್ಯ ಸರ್ಕಾರ ನಿರಾಕರಿಸಿದೆ. ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಜಮೀನು ನೀಡಲು ಸಾಧ್ಯವಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಎರಡೂವರೆ ದಶಕಗಳ ಹಿಂದೆಯೇ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ದೇವೇಗೌಡರು ಶಂಕುಸ್ಥಾಪನೆ ಮಾಡಿದ್ದರು. ಅದಕ್ಕಾಗಿ 536 ಎಕರೆ ಜಮೀನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಾರಿಯಾಗುತ್ತಿರುವ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿದೆ. ಯೋಜನೆಯ ಅನುಷ್ಠಾನಕ್ಕೆ 900 ಎಕರೆ ಜಮೀನು ಅಗತ್ಯವಿದೆ ಎಂದು ಈಗ ಹೊಸ ಪ್ರಸ್ತಾಪ ಮಾಡಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ