ಆನೆ ಹಾವಳಿ ಶಾಶ್ವತ ತಡೆ: ಪ್ರಸ್ತಾವನೆಗೆ ಸೂಚನೆ
Team Udayavani, Dec 5, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಆನೆ ದಾಳಿಯಿಂದ ಜನರ ಸಾವು-ನೋವು ಸಂಭವಿಸುವುದನ್ನು ತಡೆಯಲು ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಕಾಡಾನೆ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆಗಳು ಹಾಗೂ ಪರಿಹಾರೋ ಪಾಯ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಮಂಗಳವಾರ ಆಯೋಜನೆಯಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು. ಆನೆಗಳ ಹಾವಳಿಯಿಂದಾಗಿ ಅಪಾರ ಪ್ರಮಾಣದಲ್ಲಿ ಭತ್ತ, ಬಾಳೆ, ಅಡಿಕೆ, ಕಾಫಿ ಬೆಳೆ ಹಾನಿಯಾಗಿದೆ. ಕೂಡಲೇ ಮಾನವ-ಆನೆ ಸಂಘರ್ಷ ತಪ್ಪಿಸಲು ವೈಜ್ಞಾನಿಕ ಕ್ರಮ ಕೈಗೊಳ್ಳ ಬೇಕೆಂದು ರೈತರು ಸಭೆಯಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಯವರು, ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಸುಮಾರು 6,000 ಆನೆಗಳಿವೆ. ಬೆಳೆ ಹಾನಿ ಮಾಡುವ ಆನೆಗಳನ್ನು ಹಿಡಿದು ಶಿಬಿರಗಳಿಗೆ ಕಳುಹಿಸಲು ಹೊರ ರಾಜ್ಯಗಳಿಂದ ತಜ್ಞರನ್ನು ಕರೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಡಾನೆಗಳ ಹಾವಳಿ ತಡೆಗೆ ಈವರೆಗೆ 71
ಕಿ.ಮೀ.ಉದ್ದದ ರೈಲು ತಡೆಗೋಡೆ ನಿರ್ಮಾಣ ವಾಗಿದೆ. ಬಜೆಟ್ನಲ್ಲಿ 50 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದ್ದು, ಅದರಲ್ಲಿ
ರಾಜ್ಯದಲ್ಲಿ ಅಗತ್ಯವಿರುವ 400ರಿಂದ 500 ಕಿ.ಮೀ.ಉದ್ದದ ತಡೆಗೋಡೆ ನಿರ್ಮಾಣ ಸಾಧ್ಯವಿಲ್ಲ. ಹಾಗಾಗಿ, ಮೂರ್ನಾಲ್ಕು ವರ್ಷಗಳಿಗೆ
ಅಗತ್ಯವಿರುವ ಆರ್ಥಿಕ ನೆರವಿನ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಆದೇಶಿಸಿದರು.
ರೈಲ್ವೆ ಇಲಾಖೆಯಿಂದ ಕಬ್ಬಿಣದ ಕಂಬಿಗಳ ಖರೀದಿ ಬೆಲೆ ದುಬಾರಿಯಾಗಿದೆ. ಬೇರೆ ಪ್ರದೇಶಗಳಿಂದ ಕಂಬಿ ಸಾಗಣೆ ಮಾಡಿದರೆ
ಹೆಚ್ಚುವರಿ ಸಾರಿಗೆ ವೆಚ್ಚ ಸೇರ್ಪಡೆಯಾಗುತ್ತದೆ. ಹಾಗಾಗಿ, ರಿಯಾಯ್ತಿ ಬೆಲೆಯಲ್ಲಿ ರೈಲು ಕಂಬಿ ನೀಡುವಂತೆ ರೈಲ್ವೆ ಇಲಾಖೆಗೆ ಮನವಿ
ಸಲ್ಲಿಸಬೇಕು. ರೈಲು ತಡೆಗೋಡೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ವಿಸ್ತೃತ ಪ್ರಸ್ತಾವ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು. ಈ ಸಂಬಂಧ ದೆಹಲಿಗೆ ತೆರಳಿ ಕೇಂದ್ರ ಅರಣ್ಯ ಸಚಿವ ಡಾ.ಹರ್ಷವರ್ಧನ್ ಅವರನ್ನು ಭೇಟಿ ಮಾಡಿ ನೆರವು ನೀಡುವಂತೆ ಕೋರಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.
ಸಚಿವರಾದ ಎಚ್.ಡಿ.ರೇವಣ್ಣ, ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್