ಕೇಂದ್ರದ ಮುಂದೆ ಸಾಲಮನ್ನಾದ ಪ್ರಸ್ತಾಪವಿಲ್ಲ: ರಮೇಶ್ ಜಿಗಜಿಣಗಿ
Team Udayavani, Dec 5, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿನ ಬರ ನಿರ್ವಹಣೆ, ನೆರೆ ಪರಿಹಾರ ಕಾರ್ಯ, ರೈತರ ಸ್ಥಿತಿಗತಿ ಹಾಗೂ ಸಂಕಷ್ಟ ಅರಿಯಲು ಅಧ್ಯಯನ ಪ್ರವಾಸ ಕೈಗೊಂಡಿರುವ ಬಿಜೆಪಿ ನಾಯಕರು, ಮಂಗಳವಾರ ಬಳ್ಳಾರಿ, ದಾವಣಗೆರೆ, ರಾಯಚೂರು, ತುಮಕೂರು ಜಿಲ್ಲೆಗಳಲ್ಲಿ ಬರ
ಪರಿಶೀಲನೆ ನಡೆಸಿದರು. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಹಲವೆಡೆ ಬರ ಪರಿಶೀಲನೆ ನಡೆಸಿತು. ಈ ವೇಳೆ, ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಭೀಕರ ಬರ
ಇದ್ದರೂ ರೈತರ ಕಷ್ಟ ಆಲಿಸಲು ಉಸ್ತುವಾರಿ ಸಚಿವರಾಗಲಿ, ಅಧಿಕಾರಿಗಳಾಗಲಿ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ರೈತರಿಗೆ ತಕ್ಷಣವೇ ಕಬ್ಬಿನ ಬಾಕಿ ಪಾವತಿಸಬೇಕು ಎಂದು ಆಗ್ರಹಿಸಿದರು. ರೈತರ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯಲು ಡಿ.10ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಕೇಂದ್ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯ ಸಚಿವ ರಮೇಶ ಜಿಗಜಿಣಗಿ ನೇತೃತ್ವದ ತಂಡ ತುಮಕೂರು ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಬರದ ಪರಿಶೀಲನೆ ನಡೆಸಿತು. ಈ ಮಧ್ಯೆ, ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ ಮುಂದೆ ರಾಜ್ಯದ ರೈತರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ಸಾಲಮನ್ನಾ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಕೇವಲ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ. ವಿವಿಧ ರಾಜ್ಯಗಳ ರೈತರ
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲಮನ್ನಾ ಮಾಡಲು ಪಕ್ಷದ ಎಲ್ಲಾ ಸಂಸದರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಪ್ರಧಾನಿಯವರು ಈ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ
ತಂಡ, ಹೊಸಪೇಟೆ ಸೇರಿದಂತೆ ಬಳ್ಳಾರಿ ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ನಡೆಸಿತು. ಈ ವೇಳೆ ಸುದ್ದಿಗಾರರ ಜೊತೆ
ಮಾತನಾಡಿದ ಶೆಟ್ಟರ್, ರೈತರ ಹಲವು ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಡಿ.10ರಂದು ಸುವರ್ಣಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ಹೇಳಿದರು.
ಇದೇ ವೇಳೆ, ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ತಂಡ ದಾವಣಗೆರೆಯ ವಿವಿಧೆಡೆ ಬರ ಅಧ್ಯಯನ ನಡೆಸಿತು. ಈ ವೇಳೆ, ಸುದ್ದಿಗಾರರ ಜೊತೆ ಮಾತನಾಡಿ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ