ಫುಟ್ ಪಾತ್ ಮೇಲೆ ಹತ್ತಿದ ಕಂಟೇನರ್; ಭೀಕರ ಅಪಘಾತ, ಒಬ್ಬ ದುರ್ಮರಣ
Team Udayavani, Dec 17, 2018, 10:36 AM IST
ಬೆಂಗಳೂರು:ಫುಟ್ ಪಾತ್ ಮೇಲೆ ಮಲಗಿದ್ದ ಸುಮಾರು 15 ಮಂದಿ ಮೇಲೆ ಕಂಟೇನರ್ ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಬಾಲಕ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಳಿದಂತೆ ಅದೃಷ್ಟವಶಾತ್ ಘಟನೆಯಲ್ಲಿ ಉಳಿದವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ನೆಲಮಂಗಲದ ಜಾಸ್ ಟೋಲ್ ಬಳಿ ಫುಟ್ ಪಾತ್ ಮೇಲೆ ಮಲಗಿದ್ದು, ಈ ಸಂದರ್ಭದಲ್ಲಿ ಕಂಟೇನರ್ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಹತ್ತಿದ್ದು ಬಾಲಕ ಜೋತು ಚೌಹಾಣ್(14ವರ್ಷ), ಮಾಲಾ(45ವರ್ಷ) ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.