ಡಿಕೆಶಿ ಔತಣಕೂಟಕ್ಕೆ ಹೋಗಲ್ಲ, ಹೋಗಲ್ಲ,ಹೋಗಲ್ಲ !: ರಮೇಶ್ ಜಾರಕಿಹೊಳಿ
Team Udayavani, Dec 18, 2018, 4:40 PM IST
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಅಸಮಾಧಾನ ಹೊಗೆಯಾಡುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ಮಂಗಳವಾರ ಹಲವು ವಿದ್ಯಮಾನಗಳು ನಡೆದಿವೆ. ಒಂದೆಡೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಲವು ಪ್ರಮುಖ ನಾಯಕರು ಗೈರಾಗಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್ ಅವರು ಕರೆದಿರುವ ಔತಣಕೂಟದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರು ಪ್ರಶ್ನಿಸಿದಾಗ ನನಗೆ ಅನಾರೋಗ್ಯ ಇತ್ತು ಹಾಗಾಗಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದರು. ಡಿ.ಕೆ.ಶಿವಕುಮಾರ್ ಅವರು ಇಂದು ರಾತ್ರಿ ಕರೆದಿರುವ ಔತಣಕೂಟಕ್ಕೆ ತೆರಳುತ್ತೀರಾ ಎಂದು ಪ್ರಶ್ನಿಸಿದಾಗ ಹೋಗಲ್ಲ,ಹೋಗಲ್ಲ, ಹೋಗಲ್ಲ ಎಂದು ಮೂರು ಬಾರಿ ಹೇಳಿದರು.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆಗೆ ಕಸರತ್ತು ಮುಂದುವರಿದಿದ್ದು ಕಾಂಗ್ರೆಸ್ನಲ್ಲಿ ಯಾವ ಬೆಳವಣಿಗೆಗಳು ನಡೆಯುತ್ತದೆ ಎನ್ನುವುದನ್ನು ಕಾದು ನೋಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್