ದತ್ತಭಕ್ತರಿಂದ ಬೃಹತ್ ಶೋಭಾಯಾತ್ರೆ
Team Udayavani, Dec 22, 2018, 6:00 AM IST
ಚಿಕ್ಕಮಗಳೂರು: ದತ್ತಜಯಂತಿ ಉತ್ಸವದ ಅಂಗವಾಗಿ ನಗರದಲ್ಲಿ ಶುಕ್ರವಾರ ಗುರು ದತ್ತಾತ್ರೇಯರ ವಿಗ್ರಹದೊಂದಿಗೆ ದತ್ತಮಾಲಾಧಾರಿಗಳ ಬೃಹತ್ ಶೋಭಾಯಾತ್ರೆ ನಡೆಯಿತು. ನಗರದ ಕಾಮಧೇನು ಗಣಪತಿ ದೇವಾಲಯದಿಂದ ಆರಂಭವಾದ ಶೋಭಾಯಾತ್ರೆಯಲ್ಲಿ ಶಾಸಕ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಿ.ಎನ್.ಜೀವರಾಜ್, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ಜಿಲ್ಲಾ ಸಂಚಾಲಕ ತುಡಕೂರು ಮಂಜು, ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯಾಧ್ಯಕ್ಷ ಶಿವಶಂಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಇದೇ ವೇಳೆ, ವಿವಿಧ ಮನೆಗಳಿಗೆ ತೆರಳಿ ಪಡಿ ಸಂಗ್ರಹಿಸಿದ ಸಿ.ಟಿ.ರವಿ, ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ಬಹುಮತ ಬಂದು ನರೇಂದ್ರ ಮೋದಿ ಅವರೆ ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಹರಕೆ ಹೊತ್ತು ದತ್ತಮಾಲೆ ಧರಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಹಾಗೂ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂದು ದತ್ತಾತ್ರೇಯ ಸ್ವಾಮಿಯ ಬಳಿ ಹರಕೆ ಕಟ್ಟಿಕೊಂಡಿದ್ದೇನೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ದೇವಾಲಯಗಳನ್ನು ಸುತ್ತುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದತ್ತಪೀಠ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ