ಖಾತೆ ಹಂಚಿಕೆಗೆ ವೇಣು ಸರ್ಕಸ್‌


Team Udayavani, Dec 26, 2018, 5:45 AM IST

venugopal-25-12.jpg

ಬೆಂಗಳೂರು: ಸಂಪುಟ ಪುನಾರಚನೆಯಾಗಿ ನಾಲ್ಕು ದಿನ ಕಳೆದರೂ ಪ್ರಬಲ ಖಾತೆಗಳಿಗೆ ನೂತನ ಸಚಿವರು ಪಟ್ಟು ಹಿಡಿದಿರುವುದರಿಂದ ಗೊಂದಲ ನಿವಾರಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಬುಧವಾರ ರಾಜ್ಯ ನಾಯಕರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಮಂಗಳವಾರ ಸಂಜೆಯೇ ಬೆಂಗಳೂರಿಗೆ ಆಗಮಿಸಿರುವ ಕೆ.ಸಿ. ವೇಣುಗೋಪಾಲ್‌, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಹೇಳಿದ್ದ ರಮೇಶ್‌ ಜಾರಕಿಹೊಳಿ, ಸಂಧಾನ ಮಾತುಕತೆಗೆ ವೇದಿಕೆ ಸಜ್ಜಾಗುತ್ತಿರುವ ಹಾಗೆಯೇ ಬೆಂಗಳೂರು ತೊರೆದು ಬೆಳಗಾವಿಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಕಳಕೊಂಡ ಅನಂತರ ಯಾರ ಕೈಗೂ ಸಿಗದೆ ಇರುವ ರಮೇಶ್‌ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಾರೆ ಎನ್ನಲಾಗಿತ್ತಾದರೂ ಅದು ಸಾಧ್ಯವಾಗಿಲ್ಲ. ಈ ನಡುವೆ ಉತ್ತರ ಕರ್ನಾಟಕ ಭಾಗಕ್ಕೆ ಪ್ರಬಲ ಖಾತೆಗಳನ್ನು ನೀಡಬೇಕು ಎಂದು ಎಂ.ಬಿ. ಪಾಟೀಲ್‌ ಮತ್ತು ಸತೀಶ್‌ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಡಿ.ಕೆ. ಶಿವಕುಮಾರ್‌ ಹಿಂದೇಟು
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ  ತಾವು ನಿಭಾಯಿಸಿದ್ದ ಜಲ ಸಂಪನ್ಮೂಲ ಖಾತೆ ನೀಡುವಂತೆ ಎಂ.ಬಿ. ಪಾಟೀಲ್‌  ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಜಲ ಸಂಪನ್ಮೂಲ ಖಾತೆಯನ್ನು ಡಿ.ಕೆ. ಶಿವಕುಮಾರ್‌ ಹೊಂದಿದ್ದು, ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಜಲ ಸಂಪನ್ಮೂಲ ಖಾತೆ ನೀಡದೆ ಹೋದರೆ ಗೃಹ ಖಾತೆಯನ್ನಾದರೂ ನೀಡುವಂತೆ ಎಂ.ಬಿ. ಪಾಟೀಲ್‌ ಪಕ್ಷದ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಹಾಲಿ ಗೃಹ ಸಚಿವ ಪರಮೇಶ್ವರ್‌ ಬಿಟ್ಟುಕೊಡಲು ಒಪ್ಪುತ್ತಿಲ್ಲ. ತಾವು ಉಪ ಮುಖ್ಯಮಂತ್ರಿ ಆಗಿರುವುದರಿಂದ ಕನಿಷ್ಠ ಎರಡು ಖಾತೆಗಳಾದರೂ ಇರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇನ್ನು ಸತೀಶ್‌ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದ್ದು, ಈ ಖಾತೆಯನ್ನು ಕೃಷ್ಣ ಬೈರೇಗೌಡ ಹೊಂದಿದ್ದಾರೆ. ತಾನು ಹೆಚ್ಚುವರಿಯಾಗಿ ಹೊಂದಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಬಿಟ್ಟುಕೊಡಲು ಮುಂದಾಗಿದ್ದಾರೆ. ಹೀಗಾಗಿ ಬುಧವಾರ ಸಭೆಯಲ್ಲಿ ಯಾರ ಖಾತೆ ಯಾರಿಗೆ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ.

ಸಿದ್ದು ಸಂಧಾನ ಯಶಸ್ವಿ
ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡಿರುವ ರಾಮಲಿಂಗಾ ರೆಡ್ಡಿ, ಸುಧಾಕರ್‌, ಭೀಮಾ ನಾಯ್ಕ ಅವರನ್ನು ಸಮಾಧಾನ ಪಡಿಸುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಇವರೆಲ್ಲರನ್ನೂ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಸುಮ್ಮನಿರಿ, ಮುಂದೆ ಅವಕಾಶ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂಬುದಾಗಿ ಮೂಲಗಳು ಹೇಳಿವೆ. 

ಸಚಿವ ಸ್ಥಾನ ಹೋಗಿರುವುದರಿಂದ ರಮೇಶ ಜಾರಕಿಹೊಳಿಗೆ ನೋವಾಗಿರಬಹುದು. ಆದರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂಬುದು ಸುಳ್ಳು. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ.
– ಸತೀಶ್‌ ಜಾರಕಿಹೊಳಿ, ನೂತನ ಸಚಿವ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.