ಶೂಟೌಟ್‌ ಪದ ಬಳಕೆ ದೊಡ್ಡದು ಮಾಡಬೇಡಿ: ಸಿಎಂ

Team Udayavani, Dec 27, 2018, 6:50 AM IST

13.jpg

ಬೆಂಗಳೂರು: ಮದ್ದೂರಿನ ಜೆಡಿಎಸ್‌ ಮುಖಂಡ ಪ್ರಕಾಶ್‌ ಹಂತಕರನ್ನು ಸ್ಮೋಕ್‌ ಔಟ್‌ ಮಾಡಿ ಎಂದು ಹೇಳುವ ಬದಲು
ಭಾವಾವೇಶದಲ್ಲಿ ಶೂಟೌಟ್‌ ಮಾಡಿ ಎಂಬ ಪದ ಬಳಸಿದ್ದೇನೆ. ಅದನ್ನೇ ದೊಡ್ಡದು ಮಾಡುವುದು ಸರಿಯಲ್ಲ ಎಂದು
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸ್‌ ಇಲಾಖೆಗೆ ಹೊಸದಾಗಿ 911 ಗಸ್ತು ದ್ವಿಚಕ್ರ ವಾಹನಗಳನ್ನು ಹಸ್ತಾಂತರಿಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. “ನಾನು ಭಾವುಕ ಮನುಷ್ಯ. ಹಾಗಾಗಿ ಆ ಸಂದರ್ಭದಲ್ಲಿ ಹಾಗೆ ಮಾತನಾಡಿದ್ದೆ. ಪದ ಬಳಕೆ ತಪ್ಪಾಗಿದೆ. ಬೇಕಂತಲೇ ನಾನು ಪದ ಬಳಕೆ ಮಾಡಿಲ್ಲ. ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಆದರೂ, ಬಿಜೆಪಿ ನಾಯಕರು ಇದನ್ನು ವಿವಾದ ಮಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ರೈತರ ಮೇಲೆ ಹಾವೇರಿಯಲ್ಲಿ ಗೋಲಿಬಾರ್‌ ಮಾಡಲಾಗಿತ್ತು. ಆಗ ಬಿಜೆಪಿ ನಾಯಕರು ಚಕಾರ ಎತ್ತಿರಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೂಂಡಾಗಳ ನಾಯಕ: ಕುಮಾರಸ್ವಾಮಿ ಗೂಂಡಾಗಳ ನಾಯಕ. ಈ ಹಿಂದೆ 22 ಜನ ಹಿಂದೂ ಯುವಕರ ಹತ್ಯೆಯಾದಾಗ ಯಾವುದೇ ರೀತಿಯ ಹೇಳಿಕೆ ಕೊಡಲಿಲ್ಲ. ಈಗ ತಮ್ಮ ಸ್ನೇಹಿತ, ಜೆಡಿಎಸ್‌ ಮುಖಂಡ ಹತ್ಯೆಯಾದರೆ ಶೂಟೌಟ್‌ ಮಾಡಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಹೇಳಿದ್ದು ಶೋಭೆ ತರುವಂಥದಲ್ಲ ಎಂದು ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಬಾಗಲಕೋಟೆಯಲ್ಲಿ ಕಿಡಿ ಕಾರಿದರು.

ಸಿಎಂ ವಿರುದ್ಧ ದೂರು: ಮುಖ್ಯಮಂತ್ರಿಯವರು ಶೂಟೌಟ್‌ ಪದ ಬಳಸಿರುವುದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ
ಟಿ.ನರಸಿಂಹಮೂರ್ತಿ ಎಂಬುವರು ಬೆಂಗಳೂರಿನಲ್ಲಿ ಬುಧವಾರ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಡಿ.24ರಂದು ಮದ್ದೂರಿನ ಜೆಡಿಎಸ್‌ ಮುಖಂಡ ಪ್ರಕಾಶ್‌ ಅವರ ಹತ್ಯೆ ಸಂಬಂಧ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಕೊಲೆಗೈದ ದುಷ್ಕರ್ಮಿಗಳ ಮೇಲೆ ಶೂಟೌಟ್‌ ಮಾಡಿ ಎಂದು ಪೊಲೀಸರಿಗೆ ಕರೆ ನೀಡಿದ್ದಾರೆ.

ಜತೆಗೆ, ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಮುಖ್ಯಮಂತ್ರಿಯವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಎಚ್ಚರಿಕೆ ವಹಿಸಬೇಕು. ಜವಾಬ್ದಾರಿ ಸ್ಥಾನದಲ್ಲಿರುವ ಅವರ ಶೂಟೌಟ್‌ ಹೇಳಿಕೆಯಿಂದ ಸಮಾಜದಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ಅಲ್ಲದೆ, ಪೊಲೀಸ್‌ ತನಿಖೆಯ ದಿಕ್ಕು ತಪ್ಪಿಸಿದಂ ತಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವೇತನ, ಭತ್ಯೆ ಪರಿಷ್ಕರಣೆ ಸುಳಿವು ನೀಡಿದ ಸಿಎಂ
ಬೆಂಗಳೂರು: ರಾಜ್ಯ ಪೊಲೀಸರಿಗೆ ಹೊಸ ವರ್ಷದಲ್ಲಿ ಅವರ ಬಹುದಿನಗಳ ಬೇಡಿಕೆ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕೆಳ ಹಂತದ ಪೊಲೀಸರು ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಅವರಿಗೆ ಮತ್ತು 
ಅವರ ಕುಟುಂಬ ವರ್ಗಕ್ಕೆ ಸೌಲಭ್ಯ ಕಲ್ಪಿಸುವ ಸಂಬಂಧ ಸರ್ಕಾರಕ್ಕೆ ಹಲವು ವರದಿಗಳು ಸಲ್ಲಿಕೆಯಾಗಿವೆ. ಈ ವರದಿಗಳನ್ನೆಲ್ಲಾ ಪರಿಗಣಿಸಿ ಪೊಲೀಸ್‌ ಸಿಬ್ಬಂದಿಗೆ ಹೊಸ ವರ್ಷದ ಉಡುಗೊರೆ ಕೊಡಲಾಗುವುದು ಎಂದು ಹೇಳಿದರು. ವಿಧಾನಸೌದ ಮುಂಭಾಗದಲ್ಲಿ
ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಬೆಳೆಯುತ್ತಿದ್ದು ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್‌ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕಾಗಿದೆ. ಮುಂದಿನ ದಿನಗಳಲ್ಲಿ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.