ಬೆಂಗಳೂರು:ಹೊಸ ವರ್ಷಾಚರಣೆ ವೇಳೆ ವಿವಾಹಿತೆಗೆ ಲೈಂಗಿಕ ಕಿರುಕುಳ
Team Udayavani, Jan 1, 2019, 3:47 AM IST
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ವಿವಾಹಿತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ವೊಂದು ದಾಖಲಾಗಿದೆ.
ರಾತ್ರಿ 1 ಗಂಟೆಗೆ ರಿಚ್ಮಂಡ್ ಸರ್ಕಲ್ನಲ್ಲಿ ಘಟನೆ ನಡೆದಿದ್ದು, ಬಿಹಾರ ಮೂಲದ ಟೆಕ್ಕಿ ಮತ್ತು ಪತ್ನಿ ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಜಯಗನಗರದ ಮನೆಗೆ ಮರಳುತ್ತಿದ್ದರು. ಈ ವೇಳೆ ಮೂವರು ಯುವಕರು ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸಿದ್ದು,31 ವರ್ಷ ಪ್ರಾಯದ ಮಹಿಳೆಗೆ ಕಿರುಕುಳ ನೀಡಿದ್ದಾರೆ. ಪತಿ ಪ್ರಶ್ನಿಸಿದಾಗ ಆತನ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಂಡಿದ್ದಾರೆ.
ಅಶೋಕನಗರ ಠಾಣೆಗೆ ದಂಪತಿಗಳು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್