CONNECT WITH US  

ಬೇಲೆಕೇರಿ : ಆನಂದ್‌ ಸಿಂಗ್‌, ನಾಗೇಂದ್ರ ವಿರುದ್ಧ ವಾರೆಂಟ್‌

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಕುರಿತ ವಿಚಾರಣೆಗೆ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‌ ಸಿಂಗ್‌ ಮತ್ತು ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿದೆ.

ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಾಕ್ಷಿಗಳ ವಿಚಾರಣೆ ನಿಗದಿಯಾಗಿತ್ತು. ವಿಚಾರಣೆಗೆ ವಿಜಯನಗರ
(ಹೊಸಪೇಟೆ) ಶಾಸಕ ಆನಂದ್‌ಸಿಂಗ್‌ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಂಡಿದೆ.

ಅಲ್ಲದೆ, ಜಾಮೀನಿನ ವೇಳೆ ಈ ಇಬ್ಬರು ಶಾಸಕರಿಗೆ ಭದ್ರತಾ ಖಾತರಿ (ಶ್ಯೂರಿಟಿ) ನೀಡಿದ್ದವ್ಯಕ್ತಿಗಳಿಗೂ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಪದೇ ಪದೇ ವಿನಾಯ್ತಿ ಕೋರಿ ಅರ್ಜಿ ಸಲ್ಲಿಸಿದ್ದರಿಂದ ಅಸಮಾಧಾನಗೊಂಡ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿ ಆದೇಶಿಸಿದೆ.

Trending videos

Back to Top