ಶಿಕ್ಷಕರ ವರ್ಗ ಕಾಯ್ದೆಗೆ ತಿದ್ದುಪಡಿ

Team Udayavani, Jan 11, 2019, 12:30 AM IST

vidhana-soudha-750.jpg

ಬೆಂಗಳೂರು: ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌, ಶಿಕ್ಷಕರ ವರ್ಗಾವಣೆಯಲ್ಲಿ ಸಾಕಷ್ಟು ಗೊಂದಲಗಳಿದ್ದರಿಂದ ಕಾಯ್ದೆಗೆ ತಿದ್ದುಪಡಿ ತರಲು ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಆದರೆ, ಅಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೆಲವು ತಿದ್ದುಪಡಿ ಮಾಡಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. 

ಶಿಕ್ಷಕರು ಅಥವಾ ಅವರ ಕುಟುಂಬದವರು ಖಾಯಿಲೆಯಿಂದ ಬಳಲುತ್ತಿದ್ದು, ಅವರು ವಾಸಿಸುವ ಸ್ಥಳದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೇ ಇದ್ದರೆ, ಬುದ್ದಿ ಮಾಂದ್ಯ ಮಕ್ಕಳನ್ನು ಹೊಂದಿದ್ದರೆ ಹಾಗೂ ಐದು ವರ್ಷದಿಂದ 3 ವರ್ಷಕ್ಕೆ ವರ್ಗಾವಣೆ ಬಯಸಿದರೆ ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

 2019-20 ನೇ ಸಾಲಿಗೆ 1 ರಿಂದ 10 ನೇ ತರಗತಿಯ 44.57 ಲಕ್ಷ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲು 77 ಕೋಟಿ ರೂ. ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಲಾಯಿತು. ಅಂಗನವಾಡಿ ಮಕ್ಕಳಿಗೆ ಮೆಡಿಕಲ್‌ ಕಿಟ್‌ ನೀಡಲು 9 ಕೋಟಿ ಹಾಗೂ ಸ್ಕೂಲ್‌ ಕಿಟ್‌ ನೀಡಲು 19 ಕೋಟಿ ರೂ.ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಸಂಪುಟದ ಪ್ರಮುಖ ತೀರ್ಮಾನಗಳು
– ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 81 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ಜಮೀನು ಖರೀದಿಸಲು ತೀರ್ಮಾನ.
– ಆಲಮಟ್ಟಿ ಯೋಜನೆಯಲ್ಲಿ ಪುನರ್‌ ವಸತಿ ಕಲ್ಪಿಸಲು ಪರಿಷ್ಕೃತ ಅಂದಾಜು 7 ಕೋಟಿ ಹೆಚ್ಚಳಕ್ಕೆ ಅನುಮೋದನೆ.
– ಮುಂದಿನ ಐದು ವರ್ಷದಲ್ಲಿ ರೈತರ ಕೃಷಿ ಉತ್ಪಾದಕರ 500 ಸಂಘಗಳ ಸ್ಥಾಪನೆಗೆ 300 ಕೋಟಿ ರೂಪಾಯಿ ಮೀಸಲಿಡಲು ನಿರ್ಧಾರ.
– ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ಹೊಸ ರೈಲು ಯೋಜನೆ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ 657 ಕೋಟಿ ರೂಪಾಯಿ ಯೋಜನೆಗೆ ಒಪ್ಪಿಗೆ
– ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿಗೆ ನೀಡಿದ್ದ 648 ಎಕರೆ ಜಮೀನು ಅರಣ್ಯ ಇಲಾಖೆಗೆ ವಾಪಸ್‌ ಪಡೆಯಲು ನಿರ್ಧಾರ.
– ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ 23 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 73.64 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ
– 60 ಹೊಸ ನಾಡಕಚೇರಿ ಸ್ಥಾಪನೆಗೆ 10 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ.
– 104 ಕ್ಕೂ ಮುಂಚೆ ಎಸ್‌ಎಸ್‌ಎಲ್‌ಸಿ ಪಾಸಾಗಿ ನೇಮಕಗೊಂಡಿರುವ ಗ್ರೇಡ್‌ 2 ಗ್ರಾಮ ಪಂಚಾಯತಿ 1 ಸಾವಿರ ಅಧಿಕಾರಿಗಳಿಗೆ ಬಡ್ತಿಗೆ ಅವಕಾಶ ಕಲ್ಪಿಸಲು ಸಂಪುಟ ಒಪ್ಪಿಗೆ
– ಬೆಟ್ಟ ಕುರುಬ ಸಮುದಾಯವನ್ನು ಕಾಡುಕುರುಬ ಎಸ್ಟಿ ಸಮುದಾಯಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಅನುಮತಿ.
– ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು 139.55 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ
– ಹಾಸನ ತಾಲೂಕಿನ ಶಾಂತಿ ಗ್ರಾಮದಲ್ಲಿ ಜೈನ್‌ ಕನ್‌ಸ್ಟ್ರಕ್ಷನ್‌ ಕಂಪನಿಗೆ 40 ಎಕರೆ ಜಮೀನು ನೀಡಲು ಸಂಪುಟ ಒಪ್ಪಿಗೆ

ಕೆಪಿಎಸ್ಸಿಗೆ ಹಂಗಾಮಿ ಅಧ್ಯಕ್ಷರ ನೇಮಕ
ನಿವೃತ್ತ ಐಎಎಸ್‌ ಅಧಿಕಾರಿ ಷಡಕ್ಷರಿ ಸ್ವಾಮಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಾಮ್‌ ಭಟ್‌ ಅವರ ಅವಧಿ ಮುಕ್ತಾಯವಾಗಿರುವುದರಿಂದ ನೂತನ ಅಧ್ಯಕ್ಷರ ನೇಮಕವಾಗುವವರೆಗೂ ಷಡಕ್ಷರಿ ಸ್ವಾಮಿಯನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವ ಬಂಡೆಪ್ಪ ಕಾಶಂಪೂರ್‌ ಹೇಳಿದರು. ಕಾಯಂ ಅಧ್ಯಕ್ಷರ ನೇಮಕ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಂಪುಟ ನೀಡಿದೆ ಎಂದು ಹೇಳಿದರು.

ಜನವರಿಯಲ್ಲಿಯೇ ಜಂಟಿ ಅಧಿವೇಶನ.
ರಾಜ್ಯ ಸರ್ಕಾರ ಹೊಸ ವರ್ಷದ ಜಂಟಿ ಅಧಿವೇಶನವನ್ನು ಜನವರಿ ತಿಂಗಳಲ್ಲಿ ಕರೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ದಿನಾಂಕ ನಿಗದಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಸಚಿವ ಬಂಡೆಪ್ಪ ಕಾಶಂಪೂರ್‌ ಹೇಳಿದರು. ಫೆಬ್ರವರಿ ಮೊದಲ ವಾರದಲ್ಲಿ ಬಜೆಟ್‌ ಅಧಿವೇಶನವನ್ನು ಪ್ರತ್ಯೇಕವಾಗಿ ಕರೆಯಬೇಕೆಂಬ ಅಭಿಪ್ರಾಯ ಸಂಪುಟದಲ್ಲಿ ವ್ಯಕ್ತವಾಗಿರುವುದರಿಂದ ಜನವರಿಯಲ್ಲಿಯೇ ಜಂಟಿ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.