CONNECT WITH US  

ಬೆಂಗಳೂರು:ಮೆಟ್ರೋ ರೈಲಿನ ಎದುರು ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಯುವಕನೊಬ್ಬ ಚಲಿಸುತ್ತಿದ್ದ ಮೆಟ್ರೋ ರೈಲಿನ ಎದುರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಶುಕ್ರವಾರ ನಡೆದಿದೆ. 

ಬಸವನಗುಡಿಯ ನ್ಯಾಷನಲ್‌ ಕಾಲೇಜು ನಿಲ್ದಾಣದ ಬಳಿ ಘಟನೆ ನಡೆದಿದ್ದು, ರೈಲು ಬರುತ್ತಿದ್ದಂತೆ ಏಕಾಏಕಿ ಯುವಕ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಚಾಲಕ ತಕ್ಷಣ ಬ್ರೇಕ್‌ ಹಾಕಿದ ಪರಿಣಾಮ ಪ್ರಾಣ ಉಳಿದಿದೆ. ತಕ್ಷಣ ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರೈಲು ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ದೃಶ್ಯ ನೋಡಿ ಬೆಚ್ಚಿ ಬಿದ್ದಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಯುವಕನ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Trending videos

Back to Top