ಬೆಂಗಳೂರು:ಮೆಟ್ರೋ ರೈಲಿನ ಎದುರು ಹಾರಿ ಯುವಕ ಆತ್ಮಹತ್ಯೆಗೆ ಯತ್ನ
Team Udayavani, Jan 11, 2019, 7:20 AM IST
ಬೆಂಗಳೂರು: ಯುವಕನೊಬ್ಬ ಚಲಿಸುತ್ತಿದ್ದ ಮೆಟ್ರೋ ರೈಲಿನ ಎದುರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.
ಬಸವನಗುಡಿಯ ನ್ಯಾಷನಲ್ ಕಾಲೇಜು ನಿಲ್ದಾಣದ ಬಳಿ ಘಟನೆ ನಡೆದಿದ್ದು, ರೈಲು ಬರುತ್ತಿದ್ದಂತೆ ಏಕಾಏಕಿ ಯುವಕ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಚಾಲಕ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಪ್ರಾಣ ಉಳಿದಿದೆ. ತಕ್ಷಣ ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೈಲು ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ದೃಶ್ಯ ನೋಡಿ ಬೆಚ್ಚಿ ಬಿದ್ದಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಯುವಕನ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ