‘ಶ್ರೀಗಳಿಗೆ ಭಾರತ ರತ್ನಕ್ಕೆ ಶಿಫಾರಸು’
Team Udayavani, Jan 14, 2019, 6:13 AM IST
ತುಮಕೂರು: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಶ್ರೀಗಳಿಗೆ ಉಸಿರಾಟದ ತೊಂದರೆಯಿದ್ದು, ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸಂಪೂರ್ಣವಾಗಿ ಗುಣಮುಖರಾಗುವ ವಿಶ್ವಾಸ ಇದೆ ಎಂದರು.