ಗೌಡರ ಸಲಹೆ ಪಡೆದ ಸಿಎಂ
Team Udayavani, Jan 16, 2019, 3:23 AM IST
ಬೆಂಗಳೂರು: ಪ್ರಸ್ತುತ ಉದ್ಭವಿಸಿರುವ ರಾಜಕೀಯ ಸಂಕಷ್ಟ ನಿವಾರಣೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಚರ್ಚೆ ನಡೆಸಿದರು. ಕುಮಾರಕೃಪ ಅತಿಥಿಗೃಹದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜತೆ ಚರ್ಚೆಯ ನಂತರ ನೇರವಾಗಿ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿ ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿ ಕೆಲವು ಸಲಹೆ ಪಡೆದರು.
ಜಮೀರ್ ಜತೆ ಚರ್ಚೆ: ಈ ಮಧ್ಯೆ, ಕುಮಾರಕೃಪ ಅತಿಥಿಗೃಹದಲ್ಲಿ ಸಚಿವ ಜಮೀರ್ ಅಹಮದ್ ಅವರು ಕಾಂಗ್ರೆಸ್ ಶಾಸಕ ಆನಂದ್ಸಿಂಗ್ ಅವರನ್ನು ಕುಮಾರಸ್ವಾಮಿ ಬಳಿ ಕರೆದೊಯ್ದರು. ಆಗ, ತಾನು ಆಪರೇಷನ್ ಕಮಲ ಕಾರ್ಯಾಚರಣೆಗೆ ಒಳಗಾಗಲ್ಲ ಎಂದು ಭರವಸೆ ನೀಡಿದ ಆನಂದ್ಸಿಂಗ್, ಬಿಜೆಪಿ ನಾಯಕರು ನಡೆಸುತ್ತಿರುವ ಕಾರ್ಯತಂತ್ರಗಳ ಬಗ್ಗೆಯೂ ಮಾಹಿತಿ ನೀಡಿದರು. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಅವರು ಪ್ರತ್ಯೇಕವಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ಬಿಜೆಪಿ ಸಂಪರ್ಕದಲ್ಲಿರುವ ಶಾಸಕರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿದರು.
ಶಂಕರ್ ಮೇಲೆ ಸಿಎಂ ಗರಂ: ಈ ಮಧ್ಯೆ, ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದ ಪಕ್ಷೇತರ ಶಾಸಕ ಆರ್.ಶಂಕರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗರಂ ಆದರು. ನಿಮ್ಮನ್ನು ಸಂಪುಟಕ್ಕೆ ತೆಗೆದುಕೊಂಡಿದ್ದಕ್ಕೆ ಒಳ್ಳೆಯ ಕೊಡುಗೆ ಕೊಟ್ಟಿರಿ. ಮುಂದೆ ಪರಿಸ್ಥಿತಿ ಹೀಗೇ ಇರುವುದಿಲ್ಲ ಎಂದು ಸೂಕ್ಷ್ಮವಾಗಿ ಹೇಳಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್