ಬಿಎಸ್ವೈಗೆ ಸಿದ್ದು ಟಾಂಗ್
Team Udayavani, Jan 27, 2019, 1:15 AM IST
ಬೆಂಗಳೂರು: ಪ್ರಣಬ್ ಮುಖರ್ಜಿಗೆ ಭಾರತ ರತ್ನ ಕೊಟ್ಟಿರುವುದು ಸ್ವಾಗತಾರ್ಹ. ಆದರೆ, ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಬೇಕಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಶ್ರೀಗಳ ಪಾರ್ಥಿವ ಶರೀರದ ಮುಂದೆ ದಿನವಿಡೀ ಕೂರುವುದು ಗೌರವವಲ್ಲ ಎಂದೂ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ. ಸಿದ್ಧಗಂಗಾ ಶ್ರೀಗಳ ಸೇವೆಗೆ ಭಾರತ ರತ್ನ ಕೊಟ್ಟಿದ್ದರೆ ಅದರ ಘನತೆ ಹೆಚ್ಚುತ್ತಿತ್ತು. ಆದರೆ, ಕೇಂದ್ರ ಸರ್ಕಾರ ಯಾಕೆ ಕೊಟ್ಟಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು.