CONNECT WITH US  

ನಾಳೆ ಮಹಿಳಾ ವಿವಿ 10ನೇ ಘಟಿಕೋತ್ಸವ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಫೆ.13ರಂದು ನಡೆಯಲಿದ್ದು, ಧಾರವಾಡದ ಸಂಗೀತ ಸಾಧಕಿ ನಂದಾ ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿವಿ ಉಪ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜರುಗಲಿರುವ ಘಟಿಕೋತ್ಸವದಲ್ಲಿ ಎಚ್ಎಎಲ್‌ ಪ್ರಧಾನ ವ್ಯವಸ್ಥಾಪಕಿ ನೇಮಿಚಂದ್ರ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕಿಯಾಗಿರುವ ಡಾ.ನಂದಾ ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. 46 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ. ಮತ್ತು 10 ವಿದ್ಯಾರ್ಥಿನಿಯರಿಗೆ ಎಂ.ಫಿಲ್‌ ಹಾಗೂ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕ ಪಡೆದ 56 ವಿದ್ಯಾರ್ಥಿನಿಯರಿಗೆ 67 ಚಿನ್ನದ ಪದಕ ಸಹಿತ ಪದವಿ ಪ್ರದಾನ ನಡೆಯಲಿದೆ ಎಂದರು.


Trending videos

Back to Top