ಕಲ್ಲುತೂರಾಟ; ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು
Team Udayavani, Feb 14, 2019, 9:07 AM IST
ಬೆಂಗಳೂರು: ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಗುರುವಾರ ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡೌನ್,ಡೌನ್ ರೇವಣ್ಣ, ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರೀತಂ ಗೌಡ ಮನೆ ಮೇಲೆ ಬುಧವಾರ ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಗದ್ದಲ ಎಬ್ಬಿಸಿದ್ದರು. ಈ ಪ್ರಕರಣ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಅಲ್ಲದೇ ಆಡಳಿತರೂಢ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿತ್ತು.
ಅಲ್ಲದೇ ಹಾಸನದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ದೂರನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ