ಶಾಸಕರ ಅತೃಪ್ತಿ ಶಮನ; ಸಿದ್ದು ಕೈ ಮೇಲು

Team Udayavani, Feb 16, 2019, 12:30 AM IST

8.jpg

ಬೆಂಗಳೂರು: ಪಕ್ಷದ ನಾಯಕರ ವಿರುದಟಛಿ ಬಂಡಾಯವೆದ್ದು ಸುಮಾರು ಎರಡು ತಿಂಗಳು ಯಾವುದೇ ನಾಯಕರ ಮಾತಿಗೆ ಸ್ಪಂದಿಸದೆ ದೂರ ಉಳಿದಿದ್ದ ಕಾಂಗ್ರೆಸ್‌ನ ಅತೃಪ್ತ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಬಿ.ನಾಗೇಂದ್ರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿಯೇ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಪಕ್ಷ ಹಾಗೂ ಸರ್ಕಾರದ ಮೇಲೆ ತಮ್ಮ ಹಿಡಿತವನ್ನು ಮತ್ತಷ್ಟು ಬಲಪಡಿಸಿದಂತಾಗಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಬಿ.ನಾಗೇಂದ್ರ ಅವರು ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂಬ ಭರವಸೆಯೊಂದಿಗೆ ತಮ್ಮ ಅಸಮಾಧಾನಕ್ಕೆ ಕಾರಣ ಹಾಗೂ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದಿರುವುದಕ್ಕೆ ಸಮಜಾಯಿಷಿ ನೀಡಿದ್ದಾರೆ.

ಸಂಪುಟದಿಂದ ಕೈ ಬಿಟ್ಟ ನಂತರ ರಮೇಶ್‌ ಜಾರಕಿಹೊಳಿ ಅವರು ನಾಗೇಂದ್ರ ಜತೆ ಸೇರಿ ಮುಂಬೈ ಸೇರಿದ್ದರು. ಅವರ ಅಸಮಾಧಾನವನ್ನೇ ಬಿಜೆಪಿಯವರು ದಾಳವಾಗಿ ಬಳಸಿಕೊಂಡು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಇಪ್ಪತ್ತಕ್ಕೂ ಹೆಚ್ಚು ಶಾಸಕರನ್ನು ಸಂಪರ್ಕಿಸಿ ಬಿಜೆಪಿ ಸೇರುವಂತೆ ಆಮಿಷ ಒಡ್ಡಿ, ಆಪರೇಷನ್‌ ಕಮಲಕ್ಕೆ ಪ್ರಯತ್ನ ನಡೆಸಿದ್ದರು.ಆದರೆ, ಯಡಿಯೂರಪ್ಪ ಅವರ ಆಡಿಯೋ ಪ್ರಕರಣದ ನಂತರ ಬದಲಾದ ಪರಿಸ್ಥಿತಿಯಲ್ಲಿ ಅತೃಪ್ತರು ಅಧಿವೇಶನಕ್ಕೆ ಆಗಮಿಸಿ, ಪಕ್ಷಾಂತರ ಕಾಯ್ದೆಯ ತೂಗುಗತ್ತಿಯಿಂದ ಪಾರಾಗಿದ್ದರು. ಶುಕ್ರವಾರ ಸಚಿವ ಜಮೀರ್‌ ಅಹಮದ್‌ ಜತೆ ಒಂದು ಸುತ್ತು ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿ ಪಕ್ಷ ತೊರೆಯುವುದಿಲ್ಲ ಎಂದು ಭರವಸೆ ನೀಡಿದರು.

ಸಿದ್ದರಾಮಯ್ಯ ಕೈ ಮೇಲು: ಪಕ್ಷದಲ್ಲಿ ಉಂಟಾಗಿದ್ದ ಬಿರುಗಾಳಿಯನ್ನು ತಣ್ಣಗಾಗಿಸಿ ಅತೃಪ್ತರನ್ನು ಶಾಂತಗೊಳಿಸುವಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲದೆ, ಬಜೆಟ್‌ ಅಧಿವೇಶನದಲ್ಲಿ ಸರ್ಕಾರಕ್ಕೆ ಇದ್ದ ಅವಿಶ್ವಾಸ ನಿರ್ಣಯದ ಭೀತಿಯಿಂದಲೂ ಪಾರು ಮಾಡಿ ಮತ್ತೆ ಸರ್ಕಾರವನ್ನು ತಮ್ಮ ಹಿಡಿತಕ್ಕೆ ಅವರು ತೆಗೆದುಕೊಂಡಿದ್ದಾರೆ ಎಂಬಮಾತುಗಳು ಕೇಳಿ ಬರುತ್ತಿವೆ. ಬಜೆಟ್‌ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಶಾಸಕಾಂಗ ಪಕ್ಷದ ವತಿಯಿಂದ ವಿಪ್‌ ನೀಡಿ, ಖುದ್ದು ಸಚೇತನಾ ಪತ್ರ ಬರೆದಿದ್ದರು. ಅಧಿವೇಶನಕ್ಕೆ ಬಂದು ಅಚ್ಚರಿ ಮೂಡಿಸಿದ್ದ ಅತೃಪ್ತರು ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು.

ಬದಲಾದ ಲೆಕ್ಕಾಚಾರ: ಆದರೆ, ಆಡಿಯೋ ಪ್ರಕರಣದ ನಂತರ ಅತೃಪ್ತ ಶಾಸಕರ ಸಂಖ್ಯೆ 11 ರಿಂದ ನಾಲ್ಕಕ್ಕೆ ಇಳಿದಿದ್ದರಿಂದ ಅವರಿಂದ ರಾಜೀನಾಮೆ ಕೊಡಿಸಿದರೆ ಪ್ರಯೋಜನವಿಲ್ಲ ಎಂದು ಬಿಜೆಪಿ ಕೈ ಚೆಲ್ಲಿತು ಎನ್ನಲಾಗಿದೆ. ಹೀಗಾಗಿ, ನಾಲ್ವರು ತಮ್ಮ ಬೇಡಿಕೆ ಈಡೇರಿಸುವ ಭರವಸೆ ಪಡೆದು ಪಕ್ಷದ ತೆಕ್ಕೆಗೆ ಬಂದಿದ್ದಾರೆ. 

ದೂರು ಜೀವಂತ
ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಾಸಕ ಸ್ಥಾನದಿಂದ ಉಚ್ಚಾಟಿಸುವಂತೆ ಸ್ಪೀಕರ್‌ ರಮೇಶ್‌ ಕುಮಾರ್‌ಗೆ ನೀಡಿರುವ ದೂರು ಜೀವಂತವಾಗಿಡಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ. ಅತೃಪ್ತರು ಮತ್ತೆ ಬಂಡಾಯ ಹಾಗೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದರೆ ಸ್ಪೀಕರ್‌ ಮೂಲಕ ನೋಟಿಸ್‌ ನೀಡಿ ಮತ್ತೆ ಸಂಕಷ್ಟಕ್ಕೆ ಸಿಲುಕಿಸುವ ಅಸ್ತ್ರ ವನ್ನು ಬಳಸುವುದು ಕಾಂಗ್ರೆಸ್‌ ನಾಯಕರ ಲೆಕ್ಕಾಚಾರ ಎನ್ನಲಾಗಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.