ರಾಜ್ಯಕ್ಕೆ ಇಂದು ಅಮಿತ್‌ ಶಾ :ಬಿಜೆಪಿಯಲ್ಲಿ ಸಂಚಲನ ನಿರೀಕ್ಷೆ

Team Udayavani, Feb 21, 2019, 12:53 AM IST

amit-shah-800.jpg

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಗುರುವಾರ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸುವ ನಿರೀಕ್ಷೆ ಮೂಡಿದೆ.

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯ ಈವರೆಗಿನ ಪ್ರಯತ್ನ, ಕಾರ್ಯ ಕ್ರಮಗಳು, ರಾಷ್ಟ್ರೀಯ ಬಿಜೆಪಿ ನೀಡಿ ರುವ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಬಗ್ಗೆಯೂ ಅಮಿತ್‌ ಶಾ ಅವರು ಮಾಹಿತಿ ಪಡೆಯುವ ಸಂಭವವಿದೆ. ಜತೆಗೆ ಲೋಕಸಭಾ ಚುನಾವಣೆ ಸಿದ್ಧತೆ  ಹಾಗೂ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸ್ಪಷ್ಟ ಸೂಚನೆ ನೀಡಿ ಚುನಾವಣೆ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಿಗಿಸಿಕೊಳ್ಳುವಂತೆ ರಾಜ್ಯ ನಾಯಕರನ್ನು ಉತ್ತೇಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಂಧನೂರು ಹಾಗೂ ಹೊಸಪೇಟೆಯಲ್ಲಿ ಈಗಾಗಲೇ ಸಮಾವೇಶ ನಡೆಸಿರುವ ಅಮಿಶ್‌ ಶಾ ಅವರು ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ದೇವನಹಳ್ಳಿ ಬಳಿಯ ಆವತಿಯಲ್ಲಿನ ಅನಂತ ವಿದ್ಯಾನಿಕೇತನದಲ್ಲಿ ಮಧ್ಯಾಹ್ನ 3.45ಕ್ಕೆ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 5 ಗಂಟೆಗೆ ಯಲಹಂಕದ ರಾಯಲ್‌ ಆರ್ಕಿಡ್‌ ಹೋಟೆಲ್‌ನಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 7.15ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಕ್ಲಸ್ಟರ್‌ ಉಸ್ತುವಾರಿಗಳ ಸಭೆಯಲ್ಲಿ ಮಾರ್ಗದರ್ಶನನೀಡಲಿದ್ದಾರೆ. ರಾತ್ರಿ 9ಕ್ಕೆ ಕೋರ್‌ ಕಮಿಟಿ ಸಭೆಯಲ್ಲೂ ಭಾಗವಹಿಸಿ, ಹೋಟೆಲ್‌ನಲ್ಲೇ ರಾತ್ರಿ ವಾಸ್ತವ್ಯ ಹೂಡಿ, ಶುಕ್ರವಾರ ಬೆಳಗ್ಗೆ ತೆರಳಲಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿಯು 23 ಅಂಶಗಳ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿಗೆ ನೀಡಿತ್ತು. ಅದರ ಅನುಷ್ಠಾನ, ಸ್ಥಿತಿಗತಿ ಬಗ್ಗೆ ರಾಜ್ಯ ನಾಯಕರು ಮಾಹಿತಿ ನೀಡಲು ಸಿದಟಛಿತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಿದಟಛಿತೆ ಬಗ್ಗೆ ತಮ್ಮ ಬಳಿಯಿರುವ ಮಾಹಿತಿಯನ್ನು ಅಮಿತ್‌ ಶಾ ಅವರು ರಾಜ್ಯ ನಾಯಕರು ಸಲ್ಲಿಸುವ ಮಾಹಿತಿಯೊಂದಿಗೆ ತಾಳೆ ಹಾಕಿ ಪರಿಶೀಲಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಶಾ ಅವರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ಸಭೆ ಕರೆದಿದ್ದು, ಲೋಕಸಭಾ ಚುನಾವಣೆ ದೃಷ್ಟಿಯಿಂದ ನಿರ್ದಿಷ್ಟ ಸೂಚನೆಗಳನ್ನು ನೀಡುವ ನಿರೀಕ್ಷೆಯಿದೆ. ಹಾಗೆಯೇ ರಾಜ್ಯ ರಾಜಕೀಯ ಬೆಳವಣಿಗೆಗೆ ಪೂರಕವಾಗಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಕೆಲ ನಿರ್ದೇಶನ ನೀಡುವ ಸಾಧ್ಯತೆ ಇದೆ ಎಂದು ರಾಜ್ಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು.

ರಾತ್ರಿ 9 ಗಂಟೆಗೆ ಕೋರ್‌ ಕಮಿಟಿ ಸಭೆಯಲ್ಲೂ ಪಾಲ್ಗೊಂಡು ಅವರು ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ, ರಾಜ್ಯ ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಹಾಗೆಯೇ ರಾಜ್ಯ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಆಯ್ದ ನಾಯಕರೊಂದಿಗೆ
ಅನೌಪಚಾರಿಕವಾಗಿ ಚರ್ಚೆ ನಡೆಸಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.