ಖಡಕ್ ಡಿಸಿ ವರ್ಗಾವಣೆ ; ರೋಹಿಣಿ ಸಿಂಧೂರಿ ಹಾಸನದಿಂದ ಬೆಂಗಳೂರಿಗೆ
Team Udayavani, Feb 22, 2019, 12:32 PM IST
ಹಾಸನ: ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ.
ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರಕಾರ ತಿಳಿಸಿದೆ.
2018 ರಲ್ಲೂ ಅವಧಿಗೂ ಮುನ್ನ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿತ್ತು.ಇದನ್ನು ರೋಹಿಣಿ ಪ್ರಶ್ನಿಸಿದ್ದರು. ಚುನಾವಣಾ ಆಯೋಗ ವರ್ಗಾವಣೆಗೆ ತಡೆಯಾಜ್ಞೆ ನೀಡಿತ್ತು.
ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ.ವೆಂಕಟೇಶ್ ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿಯ ನೂತನ ಜಿಲ್ಲಾಧಿಕಾರಿಯಾಗಿ ಕೃಷ್ಣ ಬಜ್ಪೆಯಿ ಅವರನ್ನು ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ