ಪಿಯು ವಿದ್ಯಾರ್ಥಿಗಳಿಗೆ ಪ್ರಯಾಣ ಉಚಿತ
Team Udayavani, Feb 23, 2019, 12:33 AM IST
ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಅವಧಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಮಾ.1 ರಿಂದ 18ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುತ್ತವೆ. ಹೀಗಾಗಿ ಪರೀಕ್ಷೆಗೆ ಹಾಜರಾಗಲು ಅನುಕೂಲವಾಗಲು ಎಲ್ಲ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil