ಎಸೆಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ : ಪರೀಕ್ಷಾ ಮಂಡಳಿ
Team Udayavani, Mar 22, 2019, 12:30 AM IST
ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಮೊದಲ ದಿನವೇ ವಿದ್ಯಾರ್ಥಿಗಳು ಪರೀಕ್ಷಾವಧಿ ಮುಗಿಯುವ ಮುನ್ನವೇ ಪರೀಕ್ಷಾ ಕೇಂದ್ರ ದಿಂದ ಹೊರಬಂದು ಕನ್ನಡ ವಿಷಯದ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಜಾಲತಾಣ ದಲ್ಲಿ ಹರಿಯಬಿಟ್ಟಿರುವುದು ಹಲವು ಗೊಂದಲಗಳಿಗೆ ಕಾರಣ ವಾಯಿತು.
ನಿರ್ದಿಷ್ಟ ಅವಧಿಯವರೆಗೂ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಇರಬೇಕು ಎಂಬ ನಿಯಮ ಇದೆ. ಆದರೆ ರಾಯಚೂರಿನ ಲಿಂಗಸಗೂರು ತಾಲೂಕಿನ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಅವಧಿ ಮುಗಿಯುವ ಮೊದಲೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸಹಿತ ವಾಗಿ ಹೊರಬಂದು 11.25ರ ಹೊತ್ತಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟರು. ಇದು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿಗೆ ಕಾರಣವಾಯಿತು. ಕೊನೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯೇ ಸ್ಪಷ್ಟನೆ ನೀಡಿ, ಸೋರಿಕೆಯಾಗಿಲ್ಲ. ಉದ್ದೇಶಪೂರ್ವಕವಾಗಿ ಹೀಗೆ ಮಾಡಿರ ಬಹುದು. ಇದರ ವಿರುದ್ಧ ಲಿಂಗಸಗೂರಿನಲ್ಲಿ ದೂರು ದಾಖಲಿಸಿದ್ದೇವೆ ಎಂದು ಹೇಳಿದೆ.
ಹೊರಬಂದ ವಿದ್ಯಾರ್ಥಿಗಳಿಂದ ಪ್ರಶ್ನೆಪತ್ರಿಕೆಯನ್ನು ವಾಪಸ್ ಪಡೆಯ ಬೇಕಿತ್ತು. ಆದರೆ ಈ ರೀತಿ ಮಾಡಿಲ್ಲ ಎಂಬ ದೂರು ಕೇಳಿಬಂದಿದೆ.
ಅಗತ್ಯ ಕಾನೂನು ಕ್ರಮಕ್ಕೆ ಆದೇಶಿಸಿದ್ದೇವೆ ಎಂದು ಮಂಡಳಿ ನಿರ್ದೇಶಕಿ ಸುಮಂಗಳಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?