ಸುವರ್ಣ ಗತವೈಭವ, ಹೊಸಬರ ಸೂಪರ್‌ ನ್ಯಾಚುರಲ್‌ ಸುಂದರಿ

Team Udayavani, Feb 17, 2017, 3:45 AM IST

Suvarna-Sundari-(5).jpg

1957ರಲ್ಲಿ ತೆಲುಗಿನಲ್ಲಿ “ಸುವರ್ಣ ಸುಂದರಿ’ ಎಂಬ ಸಿನಿಮಾವೊಂದು ಬಂದಿತ್ತು. ಈಗ ಮತ್ತೆ ಆ ಟೈಟಲ್‌ ರಿಪೀಟ್‌ ಆಗಿದೆ. ಹೊಸಬರ ತಂಡವೊಂದು “ಸುವರ್ಣ ಸುಂದರಿ’ ಎಂಬ ಸಿನಿಮಾ ಮಾಡಲು ಹೊರಟಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಸೂರ್ಯ ಎನ್ನುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಸೂರ್ಯ “ಸುವರ್ಣ ಸುಂದರಿ’ಯಲ್ಲಿ ಹೊಸ ಬಗೆಯ ಕಥೆ ಹೇಳಲು ಹೊರಟಿದ್ದಾರಂತೆ. ಇದೊಂದು ಸೂಪರ್‌ ನ್ಯಾಚುರಲ್‌ ಥ್ರಿಲ್ಲರ್‌ ಕಥೆಯಾಗಿದ್ದು, 600 ವರ್ಷಗಳ ಹಿನ್ನೆಲೆಯೊಂದಿಗೆ ಕಥೆ ತೆರೆದುಕೊಳ್ಳುತ್ತದೆಯಂತೆ. 

“ಚಿತ್ರದ ಕಥೆ 600 ವರ್ಷಗಳ ಇತಿಹಾಸ ಹೊಂದಿದ್ದು, ಮೂರು ಹಂತಗಳಲ್ಲಿ ಸಾಗುತ್ತದೆ. ಪ್ರತಿಯೊಂದು ಹಂತದಲ್ಲೂ ಸಾಕಷ್ಟು ಹೊಸತನಗಳಿರಲಿದೆ. ಚಿತ್ರದಲ್ಲಿ ಶ್ರೀ ಕೃಷ್ಣದೇವರಾಯರ ಕಾಲದ ಆಳ್ವಿಕೆ ವೈಭೋಗವನ್ನು ಕೂಡಾ ತೋರಿಸುವ ಉದ್ದೇಶವಿದೆ. ಚಿತ್ರದಲ್ಲಿ 1960ರ ಕೆಲವು ಸನ್ನಿವೇಶಗಳು ಬರಲಿದ್ದು, ಅದನ್ನು ಕಪ್ಪು-ಬಿಳುಪುವಿನಲ್ಲಿ ತೋರಿಸಲಿದ್ದೇವೆ. ಚಿತ್ರದಲ್ಲಿ 10 ನಿಮಿಷಗಳ ಗ್ರಾಫಿಕ್‌ ಕೂಡಾ ಬರಲಿದೆ’ ಎಂದು ಸಿನಿಮಾ ಬಗ್ಗೆ ವಿವರ ನೀಡಿದರು ಸೂರ್ಯ.

ಚಿತ್ರದ ಕೆಲವು ಸನ್ನಿವೇಶಗಳನ್ನು ನೀರಿನಡಿ ಚಿತ್ರೀಕರಿಸಬೇಕಾಗಿದ್ದು, ಅನಂತಪುರ, ಕೇರಳ ಅಥವಾ ಬೀದರ್‌ನಲ್ಲಿ ಚಿತ್ರೀಕರಿಸುವ ಆಲೋಚನೆ ಇದೆಯಂತೆ.  ಮೊದಲೇ ಹೇಳಿದಂತೆ ಸುಮಾರು ನಾಲ್ಕು ಕೋಟಿ ರೂಪಾಯಿ ಬಜೆಟ್‌ನಲ್ಲಿ ಕನ್ನಡ ಹಾಗೂ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ತೆಲುಗು ಸಿನಿಮಾವನ್ನು ನಿರ್ಮಿಸಲಿದ್ದಾರಂತೆ. ಈಗಾಗಲೇ ಒಂದು ವಾರ ಕಾಲ ತೆಲುಗು ಸಿನಿಮಾದ ಚಿತ್ರೀಕರಣ ನಡೆದು ಹೋಗಿದೆ.

ಚಿತ್ರದಲ್ಲಿ ಪೂರ್ಣ ನಟಿಸುತ್ತಿದ್ದಾರೆ. ಈ ಹಿಂದೆ “ಜೋಶ್‌’ ಹಾಗೂ “ರಾಧಿಕನ್‌ ಗಂಡ’ ಚಿತ್ರದಲ್ಲಿ ನಟಿಸಿದ್ದ ಪೂರ್ಣ ಈಗ “ಸುವರ್ಣ ಸುಂದರಿ’ಯಲ್ಲಿ ನಟಿಸುತ್ತಿದ್ದಾರೆ. ಇಲ್ಲಿ ಅವರಿಗೆ  ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. ಇವರ ಪಾತ್ರ 60ರ ದಶಕದಲ್ಲಿ ಟ್ರಾವೆಲ್‌ ಆಗಲಿದ್ದು, ತಿಲಕ್‌ ಇವರ ಜೋಡಿಯಂತೆ. ಚಿತ್ರದಲ್ಲಿ ಸಾಕ್ಷಿ ರಾಜಕುಮಾರಿಯಾಗಿ ನಟಿಸುತ್ತಿದ್ದಾರೆ. ಇವರಿಗೆ ರಾಮ್‌ ಎನ್ನುವವರು ಜೋಡಿಯಾಗಿ ನಟಿಸುತ್ತಿದ್ದು, ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳ ಮೂಲಕವೂ ಕಥೆ ಮುಂದುವರೆಯಲಿದೆಯಂತೆ.  ಚಿತ್ರಕ್ಕೆ ಸಾಯಿಕಾರ್ತಿಕ್‌ ಸಂಗೀತ ನೀಡುತ್ತಿದ್ದಾರೆ. ಹಳೆಯ ದಿನಗಳ ಮೂಡ್‌ ಅನ್ನು ಸಂಗೀತದ ಮೂಲಕ ತರುವುದು ಅವರಿಗೆ ಚಾಲೆಂಜಿಂಗ್‌ ಕೆಲಸವಂತೆ. ಈಶ್ವರ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.