ಬದ್ರಿ ಫ್ಯಾಮಿಲಿ ಡ್ರಾಮಾ


Team Udayavani, Jan 4, 2019, 12:30 AM IST

x-84.jpg

ಇತ್ತೀಚೆಗಷ್ಟೇ “ಅನಂತು ವರ್ಸಸ್‌ ನುಸ್ರತ್‌’ ಎನ್ನುವ ಹೆಸರಿನ ಚಿತ್ರವೊಂದು ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ಈಗ ಅಂಥದ್ದೇ ಟೈಟಲ್‌ನ ಮತ್ತೂಂದು ಚಿತ್ರ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಆ ಚಿತ್ರದ ಹೆಸರು “ಬದ್ರಿ ವರ್ಸಸ್‌ ಮಧುಮತಿ’. ಅಂದಹಾಗೆ, “ಅನಂತು ವರ್ಸಸ್‌ ನುಸ್ರತ್‌’ ಚಿತ್ರಕ್ಕೂ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಚಿತ್ರದ ಟೈಟಲ್‌ನಲ್ಲಿ “ವರ್ಸಸ್‌’ ಎಂಬುದಿದೆ ಎನ್ನುವುದನ್ನು ಬಿಟ್ಟರೆ ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಅನ್ನೋದು ಚಿತ್ರತಂಡದ ಮಾತು. ಇತ್ತೀಚೆಗೆ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರದ ಟ್ರೇಲರ್‌ ಅನ್ನು ಚಿತ್ರತಂಡ ಹೊರತಂದಿದೆ. 

ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆದ ಸಮಾರಂಭದಲ್ಲಿ ನಿರ್ದೇಶಕ ಸಂತೋಷ್‌ ಆನಂದರಾಮ್‌ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. 

“ಬದ್ರಿ ವರ್ಸಸ್‌ ಮಧುಮತಿ’ ಚಿತ್ರದಲ್ಲಿ  ನವನಟ ಪ್ರತಾಪವನ್‌ ನಾಯಕನಾಗಿ ಬೆಳ್ಳಿತೆರೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಆಕಾಂಕ್ಷಾ ಗಾಂಧಿ ನಟಿಸುತ್ತಿದ್ದಾರೆ. ಆಂಧ್ರಪ್ರದೇಶ ಮೂಲದ ಶಂಕರ ನಾರಾಯಣ ರೆಡ್ಡಿ ಈ ಚಿತ್ರವನ್ನು ನಿರ್ದೇಶನ ಮಾಡಿ¨ªಾರೆ. 

ಇದೇ ವೇಳೆ ಮಾತನಾಡಿದ ನಾಯಕ ನಟ ಪ್ರತಾಪವನ್‌, “ಒಳ್ಳೆಯ ಚಿತ್ರ ಮಾಡಬೇಕು. ಚಿತ್ರರಂಗದಲ್ಲಿ ನಾಯಕ ನಟನಾಗಬೇಕು ಎಂಬ ಬಹು ವರ್ಷಗಳ ಕನಸು ಈ ಚಿತ್ರದ ಮೂಲಕ ನನಸಾಗುತ್ತಿದೆ. ಇದು ಸಂಪೂರ್ಣ ಆ್ಯಕ್ಷನ್‌ ಕಂ ಲವ್‌ ಪ್ರಧಾನ ಚಿತ್ರವಾಗಿದೆ. ಇದರಲ್ಲಿ ನಾನು ಆರ್ಮಿ ಆಫೀಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬರಬೇಕು ಎನ್ನುವ ಕಾರಣಕ್ಕೆ ಎಲ್ಲೂ ರಾಜಿಯಾಗದಂತೆ ಬರೋಬರಿ ನಾಲ್ಕು ವರ್ಷಗಳ ಸಮಯ ತೆಗೆದುಕೊಂಡು ಈ ಚಿತ್ರವನ್ನು ನಿರ್ಮಿಸಿದ್ದೇವೆ. ಕುಟುಂಬ ಸಮೇತ ಥಿಯೇಟರ್‌ಗೆ ಬಂದು ನೋಡುವಂಥ ಚಿತ್ರವನ್ನು ಮಾಡಿದ್ದೇವೆ’ ಎಂದರು. 

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಶಂಕರ ನಾರಾಯಣ ರೆಡ್ಡಿ, “ಚಿತ್ರದಲ್ಲಿ ನಾಯಕ ಆರ್ಮಿ ಆಫೀಸರ್‌ ಆಗಿದ್ದು ಒಂದು ಹುಡುಗಿಯನ್ನು ಪ್ರೀತಿಸುತ್ತಾನೆ. ಆದರೆ ಆ ಹುಡುಗಿಗೆ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯವಾಗುತ್ತದೆ. ತನ್ನ ಕುಟುಂಬ ಹಾಗೂ ಆ ಹುಡುಗಿ ಎರಡನ್ನೂ ಅತಿಯಾಗಿ ಪ್ರೀತಿಸುವ ನಾಯಕ ಎರಡನ್ನೂ ಯಾವ ರೀತಿಯಲ್ಲಿ ನಿಭಾಯಿಸುತ್ತಾನೆ ಎಂಬುದು ಚಿತ್ರದ ಕಥಾಹಂದರ. ಅಂತಿಮವಾಗಿ ತಾನು ಪ್ರೀತಿಸಿದ ಹುಡುಗಿಯನ್ನು ಪಡೆಯುತ್ತಾನೋ, ಇಲ್ಲವೋ? ಎಂಬುದೇ ಚಿತ್ರದ ಕ್ಲೈಮ್ಯಾಕ್ಸ್‌. ಮನರಂಜನೆಗೆ ಏನೂ ಕೊರತೆಯಿಲ್ಲದಂತೆ ಚಿತ್ರವನ್ನು ತೆರೆಮೇಲೆ ತರುತ್ತಿದ್ದೇವೆ’ ಎಂದರು. ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಕಲಾವಿದರು, ತಂತ್ರಜ್ಞರು ಹಾಜರಿದ್ದು ಚಿತ್ರದ ವಿಶೇಷತೆಗಳ ಬಗ್ಗೆ, ತಮ್ಮ ಅನಿಸಿಕೆ-ಅನುಭವಗಳನ್ನು ಹಂಚಿಕೊಂಡರು. 

“ಬದ್ರಿ ವರ್ಸಸ್‌ ಮಧುಮತಿ’ ಚಿತ್ರದ ಹಾಡುಗಳಿಗೆ ಎಲ್ವಿನ್‌ ಜೋಶ್ವಾ ಸಂಗೀತ ಸಂಯೋಜನೆಯಿದ್ದು, ಜಯಂತ ಕಾಯ್ಕಿಣಿ ಸಾಹಿತ್ಯ ಒದಗಿಸಿದ್ದಾರೆ. ಚಿತ್ರದ ದೃಶ್ಯಗಳಿಗೆ ಶಂಕರ್‌ ಛಾಯಾಗ್ರಹಣವಿದ್ದು, ಕೆ.ಎಂ ಪ್ರಕಾಶ್‌ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈಗಾಗಲೇ ಚಿತ್ರದ ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಕೆಲಸದಲ್ಲಿರುವ ಚಿತ್ರತಂಡ, ಫೆಬ್ರವರಿ ಅಂತ್ಯಕ್ಕೆ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಯೋಜನೆಯಿದೆ ಎಂದಿದೆ.  

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.